ಮಂಗಳೂರು, ಜೂ. 28 (DaijiworldNews/AK):ಐದು ವರ್ಷದ ಮಕ್ಕಳಿಗೆ ಪಲ್ಸ್ ಪೋಲಿಯೊ ಲಸಿಕೆ ನೀಡುವ ದ.ಕ. ಜಿಲ್ಲಾ ಮಟ್ಟದ ಕಾರ್ಯಕ್ರಮಕ್ಕೆ ಲೇಡಿಗೋಷನ್ ಆಸ್ಪತ್ರೆಯಲ್ಲಿ ರವಿವಾರ ಬೆಳಗ್ಗೆ ಚಾಲನೆ ನೀಡಲಾಯಿತು.




ವಿಧಾನ ಪರಿಷತ್ ಸದಸ್ಯ ಐವನ್ ಡಿ ಸೋಜಾ ಅವರು ಮಗುವಿಗೆ ಪಲ್ಸ್ ಪೋಲಿಯೊ ಲಸಿಕೆ ಹಾಕುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು ‘ ಭಾರತವು ಪೋಲಿಯೊ ಮುಕ್ತ ಆಗಿದ್ದರೂ, ಅದನ್ನು ಮುಂದುವರಿಸಲು ಮಕ್ಕಳಿಗೆ ಲಸಿಕೆ ಹಾಕುವುದು ಅಗತ್ಯ. ಎಲ್ಲ ಪಾಲಕರು ವಿಶೇಷ ಕಾಳಜಿ ವಹಿಸಿ ತಮ್ಮ ಮಕ್ಕಳ ತಮ್ಮ ಮಕ್ಕಳಿಗೆ ತಪ್ಪದೇ ಪೋಲಿಯೊ ಲಸಿಕೆ ಹಾಕಬೇಕು ಪ್ರತಿಯೊಂದು ಮಗುವು ದೇಶದ ಆಸ್ತಿಯಾಗಿದೆ. ಹೀಗಾಗಿ ಅವರ ಆರೋಗ್ಯದ ಕಡೆಗೆ ಗಮನ ಹರಿಸಬೇಕಾಗಿದೆ ಎಂದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಎಚ್.ಆರ್. ತಿಮ್ಮಯ್ಯ, ಲೇಡಿ ಗೋಶೆನ್ ಆಸ್ಪತ್ರೆಯ ಸೂಪರಿಂಟೆಂಡೆಂಟ್ ಡಾ.ಎಂ.ಆರ್. ದುರ್ಗಾ ಪ್ರಸಾದ್, ಆರೋಗ್ಯ ಇಲಾಖೆಯ ಅಧಿಕಾರಿಗಳಾದ ಡಾ.ಬಿ.ವಿ. ರಾಜೇಶ್, ಆರೋಗ್ಯ ಶಿಕ್ಷಣ ಅಧಿಕಾರಿ ಜ್ಯೋತಿ ಉಳೆಪಾಡಿ ಮತ್ತು ಇತರ ಅಧಿಕಾರಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.