ಕಾಸರಗೋಡು, ಜೂ. 30 (DaijiworldNews/AK):ಜಿಲ್ಲೆಯಲ್ಲಿ ಭಾರಿ ಮಳೆ ಮುಂದುವರಿದ ಹಿನ್ನಲೆಯಲ್ಲಿ ನಾಳೆ ಜುಲೈ1 ರಂದು ಶಾಲಾ- ಕಾಲೇಜುಗಳಿಗೆ ಜಿಲ್ಲಾಧಿಕಾರಿ ರಜೆ ಘೋಷಿಸಿ ಆದೇಶ ಹೊರಡಿಸಿದ್ದಾರೆ.

ಕೇಂದ್ರ ಹವಾಮಾನ ಇಲಾಖೆಯು ನಾಳೆ ತೀವ್ರ ಮಳೆಯಾಗುವ ಸಾಧ್ಯತೆಯ (ಆರೆಂಜ್ ಅಲರ್ಟ್) ಮುನ್ಸೂಚನೆ ನೀಡಿರುವುದರಿಂದ ಮತ್ತು ಭಾರಿ ಮಳೆ ಮುಂದುವರಿದ ಹಿನ್ನಲೆ , ಮುನ್ನೆಚ್ಚರಿಕೆ ಕ್ರಮವಾಗಿ ಶಾಲಾ- ಕಾಲೇಜುಗಳಿಗೆ ರಜೆ ನೀಡಲಾಗಿದೆ.
ಜಿಲ್ಲೆಯ ವೃತ್ತಿಪರ (ಪ್ರೊಫೆಷನಲ್) ಕಾಲೇಜುಗಳು ಸೇರಿದಂತೆ ಎಲ್ಲಾ ಕಾಲೇಜುಗಳು, ಶಾಲೆಗಳು, ಅಂಗನವಾಡಿಗಳು, ನರ್ಸರಿಗಳು, ಕೇಂದ್ರೀಯ ವಿದ್ಯಾಲಯಗಳು, ಸಿ.ಬಿ.ಎಸ್.ಇ (CBSE), ಐ.ಸಿ.ಎಸ್.ಇ (ICSE) ಶಾಲೆಗಳು, ಟ್ಯೂಷನ್ ಕೇಂದ್ರಗಳು ಮತ್ತು ಮದರಸಾಗಳು ಸೇರಿದಂತೆ ಎಲ್ಲಾ ಶೈಕ್ಷಣಿಕ ಸಂಸ್ಥೆಗಳಿಗೆ ರಜೆ ಘೋಷಿಸಲಾಗಿದೆ.
ಆದರೆ ಮುಂಚಿತವಾಗಿ ನಿಗದಿಪಡಿಸಲಾದ ಪರೀಕ್ಷೆಗಳು ಮತ್ತು ಸಂದರ್ಶನಗಳಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ. ಅವುಗಳು ಎಂದಿನಂತೆ ನಡೆಯಲಿವೆ ಎಂದು ತಿಳಿಸಲಾಗಿದೆ.