ಮಂಗಳೂರು, ಜು. 01 (DaijiworldNews/AA): ಭಾರೀ ಮಳೆ ಹಿನ್ನೆಲೆ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ಗುರುವಾರದಂದು ರಜೆ ಘೋಷಿಸಲಾಗಿದ್ದು, ಜಿಲ್ಲಾಡಳಿತದ ಆದೇಶದ ವಿರುದ್ಧವಾಗಿ ತರಗತಿಗಳನ್ನು ನಡೆಸಿದರೆ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ತಿಳಿಸಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆ ಸುರಿಯುತ್ತಿದ್ದು ರೆಡ್ ಅಲರ್ಟ್ ಘೋಷಣೆ ಇರುತ್ತದೆ. ಮುಂಜಾಗ್ರತಾ ಕ್ರಮವಾಗಿ ಜುಲೈ 2 ರಂದು ಜಿಲ್ಲೆಯ ಎಲ್ಲಾ ಸರ್ಕಾರಿ, ಖಾಸಗಿ ಅನುದಾನಿತ 12ನೇ ತರಗತಿವರೆಗಿನ ಶಾಲಾ ಕಾಲೇಜುಗಳಿಗೆ ರಜೆಯನ್ನು ಘೋಷಿಸಲಾಗಿದೆ.
ಆದರೆ ಕೆಲವು ಖಾಸಗಿ ಶಾಲೆ ಕಾಲೇಜು, ಶೈಕ್ಷಣಿಕ ಸಂಸ್ಥೆಗಳು ತರಗತಿಗಳನ್ನು ನಡೆಸುವುದಾಗಿ ಸಾಮಾಜಿಕ ಜಾಲತಾಣಗಳಲ್ಲಿ ವಿಷಯಗಳು ಹರಿದಾಡುತ್ತಿರುವುದು ಕಂಡುಬಂದಿರುತ್ತದೆ. ಹೀಗಾಗಿ ಜಿಲ್ಲಾಡಳಿತದ ಆದೇಶದ ವಿರುದ್ಧವಾಗಿ ತರಗತಿಗಳನ್ನು ನಡೆಸಿರುವುದು ಕಂಡುಬಂದಲ್ಲಿ, ವಿಪತ್ತು ನಿರ್ವಹಣಾ ಕಾಯ್ದೆ 2005 ರಡಿ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಪ್ರಕಟಣೆ ಹೊರಡಿಸಲಾಗಿದೆ.