ಬ್ರಹ್ಮಾವರ, ಜು. 03 (DaijiworldNews/AA): ಕಲ್ಯಾಣಪುರ, ಸಂತೆಕಟ್ಟೆ ಬಳಿ ಸ್ಕೂಟರ್ ಮತ್ತು ಕಾರು ಪರಸ್ಪರ ಡಿಕ್ಕಿ ಹೊಡೆದ ಪರಿಣಾಮ ತಂದೆ ಹಾಗೂ ಶಾಲಾ ವಿದ್ಯಾರ್ಥಿಯಾದ ಮಗು ಗಂಭೀರವಾಗಿ ಗಾಯಗೊಂಡಿರುವ ಘಟನೆ ವರದಿಯಾಗಿದೆ.

ಪ್ರಾಥಮಿಕ ಮಾಹಿತಿಯ ಪ್ರಕಾರ, ತಂದೆ ಮಗುವನ್ನು ಸ್ಕೂಟರ್ನಲ್ಲಿ ಕರೆದೊಯ್ಯುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ಇಬ್ಬರಿಗೂ ಗಂಭೀರ ಸ್ವರೂಪದ ಗಾಯಗಳಾಗಿದ್ದು, ಸ್ಥಳೀಯರು ತಕ್ಷಣವೇ ಅವರನ್ನು ಚಿಕಿತ್ಸೆಗಾಗಿ ಮಣಿಪಾಲದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಅಪಘಾತಕ್ಕೆ ನಿಖರ ಕಾರಣವನ್ನು ಪತ್ತೆ ಹಚ್ಚುತ್ತಿದ್ದಾರೆ.
ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ.