ಮಂಗಳೂರು, ಜು. 05 (DaijiworldNews/TA): ಕೆಲಸಕ್ಕೆಂದು ಹೋದ ಮಹಿಳೆಯೊಬ್ಬರು ನಾಪತ್ತೆಯಾದ ಘಟನೆಗೆ ಸಂಬಂಧಿಸಿದಂತೆ ಮಂಗಳೂರಿನ ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪಾಂಡೇಶ್ವರ ನ್ಯೂ ರೋಡ್ ನಿವಾಸಿ ಶರ್ಮಿಳಾ (30) ನಾಪತ್ತೆಯಾದ ಮಹಿಳೆ. ಜೂ.30ರಂದು ಬೆಳಗ್ಗೆ 9 ಗಂಟೆಗೆ ಮನೆಯಿಂದ ಕೆಲಸಕ್ಕೆಂದು ಕಚೇರಿಗೆ ಹೋಗಿದ್ದು, ಮರಳಿ ಮನೆಗೆ ಬಂದಿಲ್ಲ ಎಂದು ಹೇಳಲಾಗಿದೆ.