ಮಂಗಳೂರು, ಜು. 18 (DaijiworldNews/TA): ಬಂಟ್ವಾಳ ತಾಲೂಕಿನ ಬಿ.ಸಿ.ರೋಡ್ನಲ್ಲಿ ಲಾವಣ್ಯ ಎಂಬ ಯುವತಿಯ ಹತ್ಯೆ ಪ್ರಕರಣವನ್ನು ಖಂಡಿಸಿ, ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಬೇಕೆಂದು ಆಗ್ರಹಿಸಿ ನವಸಹಜ ಸಮುದಾಯ ಸಂಘಟನೆ ಹಾಗೂ ಲಿಂಗತ್ವ ಅಲ್ಪಸಂಖ್ಯಾತ ಸಮುದಾಯ (ದಕ್ಷಿಣ ಕನ್ನಡ) ವತಿಯಿಂದ ಮಂಗಳೂರಿನ ಕ್ಲಾಕ್ ಟವರ್ ಬಳಿ ಪ್ರತಿಭಟನೆ ನಡೆಯಿತು.

ಪ್ರತಿಭಟನೆಯಲ್ಲಿ ಭಾಗವಹಿಸಿದ ಸಂಘಟನೆಯ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು, ಲಾವಣ್ಯ ಹತ್ಯೆ ಪ್ರಕರಣದ ಆರೋಪಿಗೆ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಒತ್ತಾಯಿಸಿದರು. ಮಹಿಳೆಯರ ವಿರುದ್ಧ ನಡೆಯುತ್ತಿರುವ ಹಿಂಸಾಚಾರ ಮತ್ತು ಕೊಲೆ ಪ್ರಕರಣಗಳನ್ನು ತಡೆಯಲು ಸರ್ಕಾರ ಹಾಗೂ ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಪ್ರತಿಭಟನಾಕಾರರು ಆರೋಪಿಗೆ ಗಲ್ಲು ಶಿಕ್ಷೆ ವಿಧಿಸುವಂತೆ ಘೋಷಣೆಗಳನ್ನು ಕೂಗಿ, ಮೃತ ಲಾವಣ್ಯ ಕುಟುಂಬಕ್ಕೆ ನ್ಯಾಯ ದೊರಕಿಸಿಕೊಡುವಂತೆ ಸರ್ಕಾರವನ್ನು ಒತ್ತಾಯಿಸಿದರು. ಈ ವೇಳೆ ನವಸಹಜ ಸಮುದಾಯ ಸಂಘಟನೆಯ ಪದಾಧಿಕಾರಿಗಳು, ಲಿಂಗತ್ವ ಅಲ್ಪಸಂಖ್ಯಾತ ಸಮುದಾಯದ ಸದಸ್ಯರು ಹಾಗೂ ಹಲವು ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.