ಬಂಟ್ವಾಳ,ಜು. 22 (DaijiworldNews/AK): ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಹಾಗೂ ಪ್ರಚೋದನಾತ್ಮಕ ಪೋಸ್ಟ್ ಪ್ರಸಾರ ಮಾಡುವವರ ವಿರುದ್ದ ಪ್ರಕರಣ ದಾಖಲಾಗಿದೆ.

ಬಂಟ್ವಾಳ ನಗರ ಠಾಣಾ ಅ.ಕ್ರ 95/2026 U/S 78 126,103 ಬಿ.ಎನ್.ಎಸ್, 2023 ಮತ್ತು ಕಲಂ: 25,27,ಆರ್ಮ್ಸ್ ಆಕ್ಟ್ ಗೆ ಸಂಬಂಧಿಸಿದಂತೆ ದಾಖಲಾದ ಪ್ರಕರಣ ಕುರಿತು ವಿವಿಧ ವಾಟ್ಸ್ಆಪ್ ಗ್ರೂಪ್ಗಳು ಹಾಗೂ ಇನ್ಸ್ಟಾಗ್ರಾಂ ಖಾತೆಗಳ ಮೂಲಕ ಆರೋಪಿಯ ಭಾವಚಿತ್ರಕ್ಕೆ ಕೇಸರಿ ಶಾಲು ಹಾಗೂ ಕುಂಕುಮವನ್ನು ಅಳವಡಿಸಿ, ಭಜರಂಗದಳದ ಕಾರ್ಯಕರ್ತ ಎಂದು ಎಡಿಟ್ ಮಾಡಿ ಸುಳ್ಳು ಹಾಗೂ ಸಮಾಜದ ಶಾಂತಿ ಕದಡುವ ಬರಹಗಳನ್ನು ಹಾಕಿರುವುದಕ್ಕೆ ಸಂಬಂದಿಸಿದಂತೆ ಒಟ್ಟು ೬ ವಾಟ್ಸ್ಅಪ್ ಗ್ರೂಪ್ಗಳ ವಿರುದ್ಧ ಪ್ರಕರಣ ದಾಖಲಾಗಿದೆ.
ಫೇಸ್ ಬುಕ್ ನಲ್ಲಿ ಶೈಲಜಾ ಅಮರನಾಥ್ ಎಂಬವರ ಖಾತೆಯಲ್ಲಿ ಸುಳ್ಳು ಹಾಗೂ ಸಮಾಜದ ಶಾಂತಿ ಕದಡುವ ರೀತಿಯಲ್ಲಿ ಫೋಸ್ಟ್ ಹಾಕಿರುವ ಹಿನ್ನಲೆಯಲ್ಲಿ ಪ್ರಕರಣ ದಾಖಲಾಗಿದೆ.
ಚೇತನ್ ಬೆಳ್ಚಾಡ ಎಂಬ ಪೇಸ್ಬುಕ್ ಖಾತೆಯಲ್ಲಿ ಪ್ರಕರಣದ ಆರೋಪಿಯ ಫೋಟೋವನ್ನು ಕಾಂಗ್ರೆಸ್ ಪಾರ್ಟಿಯ ಕಾರ್ಯಕರ್ತ ಎಂದು ಎಡಿಟ್ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಹಾಗೂ ಸಮಾಜದ ಶಾಂತಿ ಕದಡುವ ರೀತಿಯಲ್ಲಿ ಪೋಸ್ಟ್ ಮಾಡಿರುವ ಬಗ್ಗೆ ಬಂಟ್ವಾಳ ನಗರ ರಾಣೆಯಲ್ಲಿ ಮತ್ತೋಮದು ಪ್ರಕರಣ ದಾಖಲಾಗಿದೆ.
ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಈ ಮೇಲಿನ 3 ಪ್ರಕರಣಗಳನ್ನು ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಮದು ಪೊಲೀಸರು ತಿಳಿಸಿದ್ದಾರೆ.