ಸುಳ್ಯ, ಜು. 23 (DaijiworldNews/TA): ಕೇಂದ್ರ ಸರ್ಕಾರದ ಜನವಿರೋಧಿ ನೀತಿಗಳು, ಸರ್ವಾಧಿಕಾರಿ ಧೋರಣೆ ಹಾಗೂ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷದ ನಾಯಕರ ಮೇಲಿನ ದಬ್ಬಾಳಿಕೆಯನ್ನು ಖಂಡಿಸಿ ಸುಳ್ಯದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬೊಳ್ಳೂರು ರಾಧಾಕೃಷ್ಣ ಅವರ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು.

ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಸೇರಿ ಕೇಂದ್ರ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಪ್ರತಿಭಟನೆಯಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ರಾಧಾಕೃಷ್ಣ ಬೊಳ್ಳೂರು, ಗ್ಯಾರಂಟಿ ಅನುಷ್ಠಾನ ಸಮಿತಿ ಜಿಲ್ಲಾಧ್ಯಕ್ಷ ಭರತ್ ಮುಂಡೋಡಿ ಸೇರಿದಂತೆ ಹಲವರು ಭಾಗಿಯಾಗಿದ್ದರು.