ವಿಟ್ಲ,ಜು. 23 (DaijiworldNews/AK): 8 ವರ್ಷಗಳಿಂದ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿಯನ್ನ ಪೊಲೀಸರು ಬಂಧಿಸಿದ್ದಾರೆ .

ಆರೋಪಿ ಕೊಲ್ಲೂರು ನಿವಾಸಿ ವಿಜಯ (32) ಎಂದು ಗುರುತಿಸಲಾಗಿದೆ.
ಪೊಲೀಸ್ ಠಾಣಾ ಅಕ್ರ:45/2017 ಕಲಂ: 379 r/w 34 IPC ಪ್ರಕರಣದಲ್ಲಿ ಆರೋಪಿಯಾಗಿ, ಸುಮಾರು 8 ವರ್ಷಗಳಿಂದ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ. ಜುಲೈ 23 ರಂದು ವಿಟ್ಲ ಠಾಣಾ ಸಿಬ್ಬಂದಿಗಳಾದ PC ಶಿವಾನಂದ PC ಯಂಕಪ್ಪ ರವರುಗಳು ಮಂಗಳೂರಿನಲ್ಲಿ ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು, ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.