ಉಡುಪಿ, ಜು. 29 (DaijiworldNews/AA): ಉಡುಪಿ ಜಿಲ್ಲಾ ಬಿಜೆಪಿ ಆಯೋಜಿಸಿದ್ದ ಪ್ರತಿಭಟನೆಯ ವೇಳೆ ಪ್ರಚೋದನಕಾರಿ ಹಾಗೂ ದ್ವೇಷ ಭಾಷಣ ಮಾಡಿದ ಆರೋಪದ ಹಿನ್ನೆಲೆಯಲ್ಲಿ ಉಡುಪಿ ಶಾಸಕ ಯಶ್ಪಾಲ್ ಸುವರ್ಣ ವಿರುದ್ಧ ಎಫ್ಐಆರ್ ದಾಖಲಾಗಿದೆ.

ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ನೀಡಿದ ದೂರಿನ ಆಧಾರದ ಮೇಲೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ದೂರಿನ ಪ್ರಕಾರ, ಪ್ರತಿಭಟನೆಯ ವೇಳೆ ಶಾಸಕ ಯಶ್ಪಾಲ್ ಸುವರ್ಣ ಅವರು ಸಿಜೆಪಿ ಪ್ರತಿಭಟನಾಕಾರರು ಹಾಗೂ ಕಾಂಗ್ರೆಸ್ ಮುಖಂಡರನ್ನು 'ಭಯೋತ್ಪಾದಕರು' ಎಂದು ಕರೆದಿದ್ದು, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು 'ಮಾದಕ ವ್ಯಸನಿ' ಎಂದು ಆರೋಪಿಸಿದ್ದಾರೆ. ಈ ಹೇಳಿಕೆಗಳು ಪ್ರಚೋದನಕಾರಿ ಹಾಗೂ ದ್ವೇಷ ಭಾಷಣದ ವ್ಯಾಪ್ತಿಗೆ ಬರುತ್ತವೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಈ ಸಂಬಂಧ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ಸಂಖ್ಯೆ 103/2026 ದಾಖಲಿಸಲಾಗಿದ್ದು, ಭಾರತೀಯ ನ್ಯಾಯ ಸಂಹಿತೆ (BNS)ಯ ಸೆಕ್ಷನ್ಗಳಾದ 57, 192, 196(2), 352, 353(2) ಮತ್ತು 351(2) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.