ಬಂಟ್ವಾಳ, ಜು. 30 (DaijiworldNews/TA): ಇತಿಹಾಸ ಪ್ರಸಿದ್ಧ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನಕ್ಕೆ ಮಹಾರಾಷ್ಟ್ರ ಬಿಜೆಪಿ ರಾಜ್ಯಾಧ್ಯಕ್ಷ ರವೀಂದ್ರ ಚೌಹಾಣ್ ಅವರು ಗುರುವಾರ ಭೇಟಿ ನೀಡಿ ದೇವಿಯ ದರ್ಶನ ಪಡೆದಿದ್ದಾರೆ.

ದೇವಸ್ಥಾನದ ಪ್ರಧಾನ ಅರ್ಚಕರಾದ ಪದ್ಮನಾಭ ಭಟ್ ಅವರು ಪ್ರಸಾದ ನೀಡಿ ಆಶೀರ್ವದಿಸಿದರು. ಈ ಸಂದರ್ಭದಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಶಾಲು ಹೊದಿಸಿ ಸ್ಮರಣಿಕೆ ನೀಡಿ ರವೀಂದ್ರ ಚೌಹಾಣ್ ಅವರನ್ನು ಗೌರವಿಸಿದರು. ಈ ಸಂದರ್ಭದಲ್ಲಿ ವೆಂಕಟೇಶ್ ನಾವಡ, ಯಶವಂತ ಪೊಳಲಿ ಸೇರಿದಂತೆ ಹಲವು ಪ್ರಮುಖರು ಉಪಸ್ಥಿತರಿದ್ದರು.