ಮಂಗಳೂರು, ಆ. 02 (DaijiworldNews/TA): ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರದ ಆಯುಕ್ತರಾಗಿ ಡಾ. ಅರುಣ್ ಕುಮಾರ್ ಶೆಟ್ಟಿ ಎನ್ ಅವರನ್ನು ಮತ್ತೊಮ್ಮೆ ಹೆಚ್ಚುವರಿ ಪ್ರಭಾರದಲ್ಲಿ ಪುನರ್ನಿಯುಕ್ತಿಗೊಳಿಸಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.

ಪ್ರಸ್ತುತ ದಕ್ಷಿಣ ಕನ್ನಡ ಜಿಲ್ಲಾ ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ಉಪನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿರುವ ಡಾ. ಅರುಣ್ ಕುಮಾರ್ ಶೆಟ್ಟಿ ಅವರು ಈ ಹಿಂದೆಯೂ ಸುಮಾರು ಒಂದೂವರೆ ವರ್ಷಗಳ ಕಾಲ ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರದ ಆಯುಕ್ತರಾಗಿ ಹೆಚ್ಚುವರಿ ಪ್ರಭಾರದಲ್ಲಿ ಸೇವೆ ಸಲ್ಲಿಸಿದ್ದರು.
ಕಳೆದ ಜೂನ್ 2026ರಲ್ಲಿ ರಾಜ್ಯ ಸರ್ಕಾರವು ರಾಜ್ಯ ಲೆಕ್ಕ ಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆಯ ಜಂಟಿ ನಿರ್ದೇಶಕರಾಗಿದ್ದ ಶ್ರೀಕಾಂತ್ ರಾವ್ ಅವರನ್ನು ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರದ ಆಯುಕ್ತರಾಗಿ ನೇಮಕ ಮಾಡಿತ್ತು. ಆದರೆ ಅವರು ಜುಲೈ ತಿಂಗಳಲ್ಲಿ ನಿವೃತ್ತರಾದ ಹಿನ್ನೆಲೆಯಲ್ಲಿ, ಹುದ್ದೆ ತೆರವಾಗಿದ್ದು, ಅನುಭವವನ್ನು ಪರಿಗಣಿಸಿ ಡಾ. ಅರುಣ್ ಕುಮಾರ್ ಶೆಟ್ಟಿ ಅವರನ್ನು ಮತ್ತೆ ಹೆಚ್ಚುವರಿ ಪ್ರಭಾರದಲ್ಲಿ ಆಯುಕ್ತರನ್ನಾಗಿ ನೇಮಕ ಮಾಡಲಾಗಿದೆ. ಡಾ. ಅರುಣ್ ಕುಮಾರ್ ಶೆಟ್ಟಿ ಅವರ ಪುನರ್ನಿಯುಕ್ತಿಯಿಂದ ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರದ ಆಡಳಿತ ಹಾಗೂ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಮತ್ತಷ್ಟು ವೇಗ ಸಿಗುವ ನಿರೀಕ್ಷೆ ವ್ಯಕ್ತವಾಗಿದೆ.