ಕಾಸರಗೋಡು, ಆ. 03 (DaijiworldNews/AK): ಜಿಲ್ಲೆಯಲ್ಲಿ ಭಾರೀ ಮಳೆ ಮುಂದುವರಿದಿರುವುದರಿಂದ ಮತ್ತು ಕೇಂದ್ರ ಹವಾಮಾನ ಇಲಾಖೆಯು ಆರೆಂಜ್ ಅಲರ್ಟ್ ಘೋಷಿಸಿರುವುದರಿಂದ ಮುನ್ನೆಚ್ಚರಿಕೆಯ ಕ್ರಮವಾಗಿ ಜಿಲ್ಲೆಯ ವೃತ್ತಿಪರ ಕಾಲೇಜುಗಳು ಸೇರಿದಂತೆ ಎಲ್ಲಾ ನಿಕಟವರ್ತಿ ವಿದ್ಯಾಸಂಸ್ಥೆಗಳಿಗೆ ಜಿಲ್ಲಾಧಿಕಾರಿ ಅರ್ಜುನ್ ಪಾಂಡ್ಯನ್ ಅವರು ಆ.4 ರಜೆ ಘೋಷಿಸಿದ್ದಾರೆ.

ಕಾಲೇಜುಗಳು, ವೃತ್ತಿಪರ ಕಾಲೇಜುಗಳು, ಶಾಲೆಗಳು, ಅಂಗನವಾಡಿಗಳು, ಟ್ಯೂಷನ್ ಕೇಂದ್ರಗಳು, ಐ.ಸಿ.ಎಸ್.ಇ (ICSE), ಸಿ.ಬಿ.ಎಸ್.ಇ (CBSE) ಶಾಲೆಗಳು, ಕೇಂದ್ರೀಯ ವಿದ್ಯಾಲಯಗಳು ಸೇರಿದಂತೆ ಎಲ್ಲಾ ಶಿಕ್ಷಣ ಸಂಸ್ಥೆಗಳಿಗೆ ಮತ್ತು ಮದರಸಾಗಳು ಸೇರಿದಂತೆ ಧಾರ್ಮಿಕ ಶಿಕ್ಷಣ ಸಂಸ್ಥೆಗಳಿಗೂ ಈ ರಜೆ ಅನ್ವಯಿಸುತ್ತದೆ.
ಆದರೆ, ಮುಂಚಿತವಾಗಿ ನಿಗದಿಪಡಿಸಲಾದ ವಿಶ್ವವಿದ್ಯಾಲಯ/ಸಾರ್ವಜನಿಕ ಪರೀಕ್ಷೆಗಳು ಮತ್ತು ಸಂದರ್ಶನಗಳಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ ಎಂದು ಜಿಲ್ಲಾಧಿಕಾರಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.