ಕಾಸರಗೋಡು, ಆ. 04 (DaijiworldNews/AK): ಕೇರಳ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ (ಕೆಎಸ್ಸಾರ್ಟಿಸಿ) ತಾತ್ಕಾಲಿಕ ಕಂಡಕ್ಟರ್ ಒಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಾಸರಗೋಡಿನ ಮುಳಿಯಾರ್ನಲ್ಲಿ ನಡೆದಿದೆ.

ಮೃತರನ್ನು ಮುಳಿಯಾರ್ನ ಮಜಕ್ಕಾರ್ ನಿವಾಸಿ ಯೋಗೀಶ್ ಎಂ (41) ಎಂದು ಗುರುತಿಸಲಾಗಿದ್ದು, ಕಳೆದ 18 ವರ್ಷಗಳಿಂದ ಕೆಎಸ್ಆರ್ಟಿಸಿಯಲ್ಲಿ ತಾತ್ಕಾಲಿಕ ಕಂಡಕ್ಟರ್ ಆಗಿ ಸೇವೆ ಸಲ್ಲಿಸುತ್ತಿದ್ದರು.
ವರದಿಗಳ ಪ್ರಕಾರ, ಯೋಗೀಶ್ ತೀವ್ರ ಒತ್ತಡದಲ್ಲಿದ್ದರು ಮತ್ತು ಕಳೆದ ಕೆಲವು ದಿನಗಳಿಂದ ತನ್ನ ಕೆಲಸವನ್ನು ಕಳೆದುಕೊಳ್ಳುವ ಭಯದಿಂದ ಖಿನ್ನತೆಯನ್ನು ಅನುಭವಿಸುತ್ತಿದ್ದರು. ಈ ಆತಂಕವೇ ಈ ದುರಂತ ಘಟನೆಗೆ ಕಾರಣ ಎಂದು ಆರೋಪಿಸಲಾಗಿದೆ. ಅವರು ತಮ್ಮ ತಾಯಿ ಮತ್ತು ಇಬ್ಬರು ಸಹೋದರರನ್ನು ಅಗಲಿದ್ದಾರೆ. ಘಟನೆಯ ಕುರಿತು ಆದೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.
ಯಾವುದೇ ಸಮಸ್ಯೆಗೆ ಆತ್ಮಹತ್ಯೆ ಪರಿಹಾರವಲ್ಲ. ನೀವು ಯಾವುದೇ ರೀತಿಯ ತೊಂದರೆಯಲ್ಲಿದ್ದರೆ ದಯವಿಟ್ಟು ಮಾನಸಿಕ ಆರೋಗ್ಯ ತಜ್ಞರ ಸಹಾಯ ಪಡೆಯಿರಿ. ಟೋಲ್ ಫ್ರೀ ಸಹಾಯವಾಣಿ ಸಂಖ್ಯೆ 9152987821 .