ಸುಳ್ಯ, ಆ. 06 (DaijiworldNews/TA): ರಾಜ್ಯ ಆರೋಗ್ಯ ಸಚಿವ ಯು.ಟಿ.ಖಾದರ್ ಅವರು ಆ.6ರಂದು ಅಂದರೆ ಗುರುವಾರ ಸುಳ್ಯಕ್ಕೆ ಆಗಮಿಸಲಿದ್ದಾರೆ.

ಇಂದು ಬೆಳಗ್ಗೆ 9 ಗಂಟೆಗೆ ಸುಳ್ಯಕ್ಕೆ ಆಗಮಿಸಲಿರುವ ಅವರು ಪ್ರಾಕೃತಿಕ ವಿಕೋಪ ಪರಿಶೀಲನೆ ನಡೆಸಿ, ಬೆಳಗ್ಗೆ 10 ಗಂಟೆಗೆ ಸುಳ್ಯ ತಾಲೂಕು ಪಂಚಾಯತ್ ನಲ್ಲಿ ಅಧಿಕಾರಿಗಳ ಸಭೆ ನಡೆಸಲಿದ್ದಾರೆ ಎಂದು ತಿಳಿದು ಬಂದಿದೆ.