ಬಂಟ್ವಾಳ, ಆ. 10 (DaijiworldNews/TA): ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ನ ನಾವೂರು ಬಿ ಒಕ್ಕೂಟದ ವತಿಯಿಂದ ‘ಆಟಿಡ್ ಒಂಜಿ ದಿನ’ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮವನ್ನು ಉಡುಪಿ ಪ್ರಾದೇಶಿಕ ವಿಭಾಗದ ನಿರ್ದೇಶಕ ಆನಂದ ಸುವರ್ಣ ಅವರು ಚೆನ್ನೆಮಣೆ ಆಟ ಆಡುವ ಮೂಲಕ ಉದ್ಘಾಟಿಸಿ ಮಾತನಾಡಿದರು. ತುಳುನಾಡಿನ ಆಚಾರ-ವಿಚಾರ, ಸಂಸ್ಕೃತಿ, ಸಂಸ್ಕಾರ ಹಾಗೂ ಸಾಂಪ್ರದಾಯಿಕ ಆಚರಣೆಗಳನ್ನು ಮುಂದಿನ ಪೀಳಿಗೆಗೆ ಪರಿಚಯಿಸುವ ಜವಾಬ್ದಾರಿ ನಮ್ಮ ಮೇಲಿದೆ. ಆಧುನಿಕತೆಯ ನಡುವೆ ನಮ್ಮ ನೆಲದ ಸಂಸ್ಕೃತಿ ಮತ್ತು ಪರಂಪರೆಯನ್ನು ಉಳಿಸಿ ಬೆಳೆಸುವ ಕಾರ್ಯವಾಗಬೇಕು ಎಂದು ಅವರು ಹೇಳಿದರು.
ಕಾರ್ಯಕ್ರಮದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ನಿರ್ದೇಶಕ ದಿನೇಶ್ ಪೂಜಾರಿ, ಬಂಟ್ವಾಳ ತಾಲೂಕು ಯೋಜನಾಧಿಕಾರಿ ಜಯಾನಂದ ಪಿ., ಒಕ್ಕೂಟದ ಅಧ್ಯಕ್ಷ ಸದಾನಂದ ಗೌಡ ಉಪಸ್ಥಿತರಿದ್ದರು.