ಮಂಗಳೂರು, ಆ. 13 (DaijiworldNews/AK): ನಗರ ವ್ಯಾಪ್ತಿಯಲ್ಲಿ ರಸ್ತೆ ಅಪಘಾತಗಳನ್ನು ತಡೆಗಟ್ಟುವ, ಸಂಚಾರ ನಿಯಂತ್ರಣವನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸುವ ಹಾಗೂ ವಾಹನಗಳ ಸುಗಮ ಸಂಚಾರದ ಉದ್ದೇಶದಿಂದ ಮಂಗಳೂರು ನಗರ ಪೊಲೀಸ್ ವತಿಯಿಂದ ಆಗಾಗ್ಗೆ ವಿಶೇಷ ಸಂಚಾರ ಕಾರ್ಯಾಚರಣೆಗಳನ್ನು ಕೈಗೊಳ್ಳಲಾಗುತ್ತಿದೆ.



ಈ ನಿಟ್ಟಿನಲ್ಲಿ, ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಪಾದಚಾರಿಗಳ ಸುರಕ್ಷತೆ ಹಾಗೂ ಸಾರ್ವಜನಿಕ ವಾಹನಗಳ ಸುಗಮ ಸಂಚಾರಕ್ಕೆ ಅಡ್ಡಿಯಾಗುವ N
ನೋ ಪಾರ್ಕಿಂಗ್, ಪುಟ್ಪಾತ್ ಪಾರ್ಕಿಂಗ್, ತಪ್ಪಾದ ಪಾರ್ಕಿಂಗ್, ಡಬಲ್ ಪಾರ್ಕಿಂಗ್, ಸಂಚಾರ ಅಡಚಣೆ ಹಾಗೂ ಇತರೆ ಪಾರ್ಕಿಂಗ್ ನಿಯಮ ಉಲ್ಲಂಘನೆಗಳ ವಿರುದ್ಧ ಹಾಗೂ ಇತರೆ ಪಾರ್ಕಿಂಗ್ ನಿಯಮ ಉಲ್ಲಂಘನೆಗಳ ವಿರುದ್ಧ ಜೂನ್ 2026 ರಿಂದ ಈವರೆಗೆ ಒಟ್ಟು 7,490 ಪ್ರಕರಣಗಳನ್ನು ದಾಖಲಿಸಿ, ರೂ.3,07,600 ದಂಡವನ್ನು ವಸೂಲಿ ಮಾಡಲಾಗಿದೆ.
ಇದರಲ್ಲಿ 1080ಪುಟ್ಪಾತ್ ಪಾರ್ಕಿಂಗ್ ಪ್ರಕರಣಗಳು ಒಳಗೊಂಡಿದೆ. ಅದೇ ರೀತಿ, ನಕಲಿ ಹಾಗೂ ದೋಷಪೂರಿತ ನಂಬರ್ ಪ್ಲೇಟ್ಗಳನ್ನು ಬಳಸಿಕೊಂಡು ಸಂಚರಿಸುವುದು ಮತ್ತು ಅವುಗಳ ಮೂಲಕ ಅಪರಾಧ ಕೃತ್ಯಗಳನ್ನು ಎಸಗುವುದನ್ನು ತಡೆಗಟ್ಟುವ ಉದ್ದೇಶದಿಂದ ಅಗಸ್ಟ್ 04, 2026 ರಿಂದ 12, 2026 ರವರೆಗೆ ವಿಶೇಷ ಕಾರ್ಯಾಚರಣೆ ನಡೆಸಲಾಗಿದೆ.
ಈ ಕಾರ್ಯಾಚರಣೆಯಲ್ಲಿ ದೋಷಪೂರಿತ ನಂಬರ್ ಪ್ಲೇಟ್ ಹೊಂದಿದ್ದ 258 ವಾಹನಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ನಂಬರ್ ಪ್ಲೇಟ್ ಅಳವಡಿಸದೇ ಸಂಚರಿಸುತ್ತಿದ್ದ 74 ವಾಹನಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಒಟ್ಟು 332 ಪ್ರಕರಣಗಳನ್ನು ದಾಖಲಿಸಿ, ರೂ.3,01,000 ದಂಡವನ್ನು ವಿಧಿಸಲಾಗಿದೆ. ನಂಬರ್ ಪ್ಲೇಟ್ಗಳನ್ನು ಸ್ಪಷ್ಟವಾಗಿ, ನಿಯಮಾನುಸಾರ ಹಾಗೂ ವಾಹನಕ್ಕೆ ನಿಗದಿಪಡಿಸಿದ ರೀತಿಯಲ್ಲಿ ಅಳವಡಿಸಿಕೊಳ್ಳುವುದು ಪ್ರತಿಯೊಬ್ಬ ವಾಹನ ಮಾಲೀಕರ ಜವಾಬ್ದಾರಿಯಾಗಿದೆ.
ಅದುದ್ದರಿಂದ ನಿಗದಿ ಪಡಿಸಿರುವ ಹೆಚ್.ಎಸ್.ಅರ್.ಪಿ ನಂಬ್ರ ಪ್ಲೇಟ್ ಗಳನ್ನು ಅಳವಡಿಸುವುದು. ಮಂಗಳೂರು ನಗರ ಪೊಲೀಸ್ ವತಿಯಿಂದ ಕೈಗೊಳ್ಳಲಾಗುತ್ತಿರುವ ಈ ವಿಶೇಷ ಕಾರ್ಯಾಚರಣೆಗಳು ಮುಂದಿನ ದಿನಗಳಲ್ಲಿಯೂ ಮುಂದುವರಿಯಲಿವೆ. ಆದ್ದರಿಂದ ಸಾರ್ವಜನಿಕರು ಕಡ್ಡಾಯವಾಗಿ ಸಂಚಾರ ನಿಯಮಗಳನ್ನು ಪಾಲಿಸಿ, ಸುರಕ್ಷಿತ ಸಂಚಾರಕ್ಕೆ ಸಹಕರಿಸುವಂತೆ ಕೋರಲಾಗಿದೆ.