ತಲಪಾಡಿ, ಆ. 17 (DaijiworldNews/TA): ಪಿಲಿಕೂರಿನ ಸಾಲ್ಯಾನ್ ಕುಟುಂಬಸ್ಥರ ಮೂಲಸ್ಥಾನದಲ್ಲಿ ನಾಗರಪಂಚಮಿ ಪ್ರಯುಕ್ತ ವಿಶೇಷ ನಾಗಾರಾಧನೆ ಹಾಗೂ ಪೂಜಾ ಕಾರ್ಯಕ್ರಮ ಶ್ರದ್ಧಾಭಕ್ತಿಯಿಂದ ನೆರವೇರಿತು.

ನಾಗದೇವರ ಸನ್ನಿಧಿಯಲ್ಲಿ ವಿಶೇಷ ಪೂಜೆ, ನಾಗತಂಬಿಲ ಸೇರಿದಂತೆ ವಿವಿಧ ಹರಕೆ ಸೇವೆಗಳು ಜರುಗಿದವು. ಬೆಳಗ್ಗಿನಿಂದಲೇ ಸಾವಿರಾರು ಭಕ್ತರು ಆಗಮಿಸಿ ನಾಗದೇವರ ದರ್ಶನ ಪಡೆದು, ಪ್ರಸಾದ ಸ್ವೀಕರಿಸಿದರು. ಸಾಲ್ಯಾನ್ ಕುಟುಂಬಸ್ಥರ ನೇತೃತ್ವದಲ್ಲಿ ಭಕ್ತರಿಗೆ ಅಗತ್ಯ ವ್ಯವಸ್ಥೆಗಳನ್ನು ಕಲ್ಪಿಸಲಾಗಿದ್ದು, ಇಡೀ ಪಿಲಿಕೂರು ಪರಿಸರದಲ್ಲಿ ಭಕ್ತಿಪೂರ್ವಕ ವಾತಾವರಣ ನೆಲೆಸಿತ್ತು.