ಕಾಸರಗೋಡು, ಸೆ.13 (DaijiworldNews/AA): 15 ವರ್ಷದ ವಿದ್ಯಾರ್ಥಿಯೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೇಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ಕೀಕಾನದಲ್ಲಿ ನಡೆದಿದೆ.

ಮೃತರನ್ನು ಕಾಸರಗೋಡಿನ ಶಾಲೆಯೊಂದರಲ್ಲಿ 10ನೇ ತರಗತಿ ವ್ಯಾಸಂಗ ಮಾಡುತ್ತಿದ್ದ ಧ್ಯಾನ್ ರಾಜ್ ಎಂದು ಗುರುತಿಸಲಾಗಿದೆ.
ಧ್ಯಾನ್ ರಾಜ್ ಮಂಗಳೂರು ಜಿಲ್ಲಾಧಿಕಾರಿ ಕಚೇರಿಯಲ್ಲಿ ಉದ್ಯೋಗಿಯಾಗಿರುವ ರಾಜೇಶ್ ಕುಮಾರ್ ಹಾಗೂ ಮಾನ್ಯ ಕಲ್ಬಟ್ಟ ಶಾಲೆಯಲ್ಲಿ ಶಿಕ್ಷಕಿಯಾಗಿರುವ ನಿರೀಕ್ಷಾ ಅವರ ಪುತ್ರ. ಕುಟುಂಬವು ಬೇಕಲ್ನ ಪಳ್ಳಿಕೆರೆ, ಕೀಕಾನದಲ್ಲಿ ವಾಸವಾಗಿತ್ತು.
ಇತ್ತೀಚೆಗೆ ನಡೆದ ಪರೀಕ್ಷೆಯಲ್ಲಿ ಕಡಿಮೆ ಅಂಕ ಗಳಿಸಿದ್ದರಿಂದ ಮನನೊಂದು ಬಾಲಕ ಆತ್ಮಹತ್ಯೆಗೆ ಶರಣಾಗಿರಬಹುದು ಎಂದು ಶಂಕಿಸಲಾಗಿದೆ. ಆದರೆ ಘಟನೆಗೆ ನಿಖರ ಕಾರಣ ಇನ್ನಷ್ಟೇ ತಿಳಿದುಬರಬೇಕಿದೆ.
ಈ ಬಗ್ಗೆ ಬೇಕಲ್ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.