ಸುಳ್ಯ, ಸೆ.16 (DaijiworldNews/AA): ಬಾಳೆಮಕ್ಕಿಯ ಶ್ರೀಹರಿ ಕಾಂಪ್ಲೆಕ್ಸ್ನಲ್ಲಿರುವ ಗೋದಾಮೊಂದರಲ್ಲಿ ಸೆಪ್ಟೆಂಬರ್ 14ರ ಮುಂಜಾನೆ ಭಾರೀ ಅಗ್ನಿ ಅವಘಡ ಸಂಭವಿಸಿದೆ.

ಗೋದಾಮಿನಲ್ಲಿ ಬೆಂಕಿ ಕಾಣಿಸಿಕೊಂಡಿರುವುದನ್ನು ಗಮನಿಸಿದ ಅಂಗಡಿ ಮಾಲೀಕರು ತಕ್ಷಣ ಕಟ್ಟಡದ ಮಾಲೀಕರಿಗೆ ಹಾಗೂ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಗೆ ಮಾಹಿತಿ ನೀಡಿದರು.
ಮಾಹಿತಿ ದೊರೆತ ಕೂಡಲೇ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಸತತ ಪ್ರಯತ್ನ ನಡೆಸಿ ಬೆಂಕಿಯನ್ನು ನಿಯಂತ್ರಣಕ್ಕೆ ತಂದು ಸಂಪೂರ್ಣವಾಗಿ ನಂದಿಸುವಲ್ಲಿ ಯಶಸ್ವಿಯಾದರು.
ಬೆಂಕಿ ಅವಘಡಕ್ಕೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಘಟನೆಗೆ ಸಂಬಂಧಿಸಿದಂತೆ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ.