ಮಂಗಳೂರು, ಸೆ.17 (DaijiworldNews/TA): ದೇರಳಕಟ್ಟೆಯ ಫಾದರ್ ಮುಲ್ಲರ್ ಕಾಲೇಜ್ ಆಫ್ ಫಾರ್ಮಾಸ್ಯುಟಿಕಲ್ ಸೈನ್ಸಸ್ನಲ್ಲಿ 2026–27ನೇ ಶೈಕ್ಷಣಿಕ ಸಾಲಿನ ಬಿ.ಫಾರ್ಮ್ ಮೂರನೇ ಬ್ಯಾಚ್ನ ಕೋರ್ಸ್ ಉದ್ಘಾಟನಾ ಸಮಾರಂಭವು ಬುಧವಾರ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು.








ಫಾದರ್ ಮುಲ್ಲರ್ ಚಾರಿಟೇಬಲ್ ಇನ್ಸ್ಟಿಟ್ಯೂಷನ್ಸ್ನ ನಿರ್ದೇಶಕ ರೆವ. ಫಾ. ಫಾಸ್ಟಿನ್ ಲೂಕಾಸ್ ಲೋಬೋ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಫಾದರ್ ಮುಲ್ಲರ್ ಹೋಮಿಯೋಪಥಿಕ್ ಮೆಡಿಕಲ್ ಕಾಲೇಜಿನ ಉಪಪ್ರಾಂಶುಪಾಲರಾದ ಡಾ. ವಿಲ್ಮಾ ಮೀರಾ ಡಿಸೋಜಾ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ಫಾದರ್ ಮುಲ್ಲರ್ ಹೋಮಿಯೋಪಥಿಕ್ ಮೆಡಿಕಲ್ ಕಾಲೇಜಿನ ಪ್ರಾಂಶುಪಾಲರಾದ ಡಾ. ಇ. ಎಸ್. ಜೆ. ಪ್ರಭು ಕಿರಣ್, ಆಡಳಿತಾಧಿಕಾರಿ ರೆವ. ಫಾ. ಡೊನಾಲ್ಡ್ ನಿಲೇಶ್ ಕ್ರಾಸ್ಟಾ, ಫಾದರ್ ಮುಲ್ಲರ್ ಹೋಮಿಯೋಪಥಿಕ್ ಫಾರ್ಮಾಸ್ಯುಟಿಕಲ್ ವಿಭಾಗದ ಆಡಳಿತಾಧಿಕಾರಿ ರೆವ. ಫಾ. ನೆಲ್ಸನ್ ಧೀರಜ್ ಪಾಯಿಸ್ ಹಾಗೂ ಫಾರ್ಮಾಸ್ಯುಟಿಕಲ್ ಸೈನ್ಸಸ್ ಕಾಲೇಜಿನ ಪ್ರಾಂಶುಪಾಲರಾದ ಡಾ. ಸತೀಶ್ ಎಸ್. ಉಪಸ್ಥಿತರಿದ್ದರು.
ಪ್ರಾರ್ಥನಾ ಗೀತೆಯೊಂದಿಗೆ ಆರಂಭಗೊಂಡ ಕಾರ್ಯಕ್ರಮದಲ್ಲಿ ಸಾಂಪ್ರದಾಯಿಕ ದೀಪ ಬೆಳಗಿಸುವ ಮೂಲಕ ಕೋರ್ಸ್ಗೆ ಅಧಿಕೃತ ಚಾಲನೆ ನೀಡಲಾಯಿತು. ಸ್ವಾಗತ ಭಾಷಣದಲ್ಲಿ ರೆ.ಫಾ. ಡೊನಾಲ್ಡ್ ನಿಲೇಶ್ ಕ್ರಾಸ್ಟಾ ಅವರು ವಿದ್ಯಾರ್ಥಿಗಳು ಶಿಸ್ತು, ಬದ್ಧತೆ ಮತ್ತು ಪರಿಶ್ರಮದೊಂದಿಗೆ ಶೈಕ್ಷಣಿಕ ಶ್ರೇಷ್ಠತೆಯನ್ನು ಸಾಧಿಸುವಂತೆ ಕರೆ ನೀಡಿದರು. ಮುಖ್ಯ ಅತಿಥಿ ಡಾ. ವಿಲ್ಮಾ ಮೀರಾ ಡಿಸೋಜಾ ಅವರು ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿ, ಆರೋಗ್ಯ ಕ್ಷೇತ್ರದಲ್ಲಿ ಯಶಸ್ವಿ ವೃತ್ತಿಜೀವನಕ್ಕಾಗಿ ಸಮರ್ಪಣೆ, ಕರುಣೆ ಮತ್ತು ನಿರಂತರ ಕಲಿಕೆ ಅಗತ್ಯವೆಂದು ತಿಳಿಸಿದರು.
ಅಧ್ಯಕ್ಷೀಯ ಭಾಷಣದಲ್ಲಿ ರೆವ. ಫಾ. ಫಾಸ್ಟಿನ್ ಲೂಕಾಸ್ ಲೋಬೋ ಅವರು ಮೌಲ್ಯಗಳು, ಜವಾಬ್ದಾರಿ ಮತ್ತು ನಾಯಕತ್ವವು ವೃತ್ತಿಪರ ಬೆಳವಣಿಗೆಯ ಪ್ರಮುಖ ಅಂಶಗಳಾಗಿವೆ ಎಂದು ಹೇಳಿದರು. ನಂತರ ನಡೆದ ಅಧಿವೇಶನದಲ್ಲಿ ಪ್ರಾಂಶುಪಾಲ ಡಾ. ಸತೀಶ್ ಎಸ್. ಅವರು ವಿದ್ಯಾರ್ಥಿಗಳಿಗೆ ಕಾಲೇಜಿನ ನಿಯಮಗಳು, ಶೈಕ್ಷಣಿಕ ನಿರೀಕ್ಷೆಗಳು ಹಾಗೂ ಶಿಸ್ತು ಕುರಿತು ಮಾಹಿತಿ ನೀಡಿದರು. ಆಡಳಿತಾಧಿಕಾರಿ ರೆವ. ಫಾ. ಡೊನಾಲ್ಡ್ ನಿಲೇಶ್ ಕ್ರಾಸ್ಟಾ ಅವರು ವಿದ್ಯಾರ್ಥಿಗಳು ಮತ್ತು ಪೋಷಕರೊಂದಿಗೆ ಸಂವಾದ ನಡೆಸಿ ಹಾಸ್ಟೆಲ್ ನಿಯಮಗಳು ಹಾಗೂ ಸೌಲಭ್ಯಗಳ ಕುರಿತು ವಿವರಿಸಿದರು.
ಕಾರ್ಯಕ್ರಮದಲ್ಲಿ ಬೋಧಕ ಸಿಬ್ಬಂದಿ, ಪೋಷಕರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಹೊಸ ಶೈಕ್ಷಣಿಕ ಪಯಣಕ್ಕೆ ಚಾಲನೆ ನೀಡಿದ ಈ ಸಮಾರಂಭವು ಭವಿಷ್ಯದ ಸಮರ್ಥ ಹಾಗೂ ಮಾನವೀಯ ಮೌಲ್ಯಗಳನ್ನು ಹೊಂದಿರುವ ಫಾರ್ಮಸಿ ವೃತ್ತಿಪರರನ್ನು ರೂಪಿಸುವ ಸಂಸ್ಥೆಯ ಬದ್ಧತೆಯನ್ನು ಪ್ರತಿಬಿಂಬಿಸಿತು. ಕಾರ್ಯಕ್ರಮವನ್ನು ಶ್ರೀಮತಿ ಫ್ಮಿತ್ ಸೆಲ್ವಿಯಾ ಮಿರಾಂಡಾ ಹಾಗೂ ಶ್ರೀಮತಿ ನಿಶ್ಮಿತಾ ಗ್ರೆಟ್ಟಾ ಡಿಸೋಜಾ ನಿರೂಪಿಸಿದರು.