ಬಂಟ್ವಾಳ,ಸೆ.18 (DaijiworldNews/AK):ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನದ ಅಂಗವಾಗಿ ತಾಲೂಕಿನ ವಿವಿಧ ದೇವಾಲಯಗಳಲ್ಲಿ ವಿಶೇಷ ಪೂಜೆ ಹಾಗೂ ಪ್ರಾರ್ಥನೆಗಳು ನಡೆದವು.



ಬಿ.ಸಿ.ರೋಡಿನ ಶ್ರೀ ರಕ್ತೇಶ್ವರಿ ದೇವಸ್ಥಾನದ ವಠಾರದಲ್ಲಿ ಹಿಂದೂ ಧಾರ್ಮಿಕ ಸೇವಾ ಸಮಿತಿಯ ಆಶ್ರಯದಲ್ಲಿ ನಡೆಯುತ್ತಿರುವ 47ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಕಾರ್ಯಕ್ರಮದಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಭಾಗವಹಿಸಿ, ಪ್ರಧಾನಿ ನರೇಂದ್ರ ಮೋದಿ ಅವರ ಹೆಸರಿನಲ್ಲಿ ಗಣಪತಿ ದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು.
ಈ ಸಂದರ್ಭ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಉತ್ತಮ ಆರೋಗ್ಯ, ದೀರ್ಘಾಯುಷ್ಯ ಹಾಗೂ ದೇಶದ ಜನರ ಸೇವೆ ಮಾಡಲು ಮತ್ತಷ್ಟು ಶಕ್ತಿ ದೊರೆಯಲಿ ಎಂದು ಪ್ರಾರ್ಥಿಸಲಾಯಿತು. ದೇಶದ ಅಭಿವೃದ್ಧಿ, ಉತ್ತಮ ಆಡಳಿತ ಹಾಗೂ ಜನಕಲ್ಯಾಣ ಕಾರ್ಯಗಳು ನಿರಂತರವಾಗಿ ನಡೆಯುವಂತಾಗಲಿ ಎಂಬ ಆಶಯದೊಂದಿಗೆ ದೇವರಲ್ಲಿ ಪ್ರಾರ್ಥನೆ ಸಲ್ಲಿಸಲಾಯಿತು.
ರಾಜ್ಯ ಬಿಜೆಪಿ ಪ್ರಮುಖರಾದ ವಿಕಾಸ್ ಪುತ್ತೂರು, ಬಂಟ್ವಾಳ ಬಿಜೆಪಿ ಮಂಡಲದ ಅಧ್ಯಕ್ಷ ಚೆನ್ನಪ್ಪ ಆರ್ ಕೋಟ್ಯಾನ್, ಪ್ರಧಾನ ಕಾರ್ಯದರ್ಶಿ ಗಳಾದ ಶಿವಪ್ರಸಾದ್ ಶೆಟ್ಟಿ, ಸುದರ್ಶನ ಬಜ, ಪಕ್ಷದ ಪ್ರಮುಖರಾದ ಗೋಪಾಲ ಸುವರ್ಣ ಸೇರಿದಂತೆ ಕಾರ್ಯಕರ್ತರು ಹಾಗೂ ಭಕ್ತರು ಉಪಸ್ಥಿತರಿದ್ದರು