ಸುಳ್ಯ, ಸೆ.21 (DaijiworldNews/TA): ಬಸ್ಸಿನಿಂದ ಇಳಿದು ರಸ್ತೆ ದಾಟುತ್ತಿದ್ದ ಪಾದಚಾರಿಯೊಬ್ಬರಿಗೆ ಹಿಂಬದಿಯಿಂದ ಬಂದ ಲಾರಿ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಸುಳ್ಯದ ಜಾಲ್ಲೂರು ಗ್ರಾಮದ ವಿನೋಬಾನಗರದಲ್ಲಿ ನಡೆದಿದೆ.


ಬಸ್ಸಿನಿಂದ ಇಳಿದ ಬಳಿಕ ಪಾದಚಾರಿ ರಸ್ತೆ ದಾಟುತ್ತಿದ್ದ ವೇಳೆ ಹಿಂಬದಿಯಿಂದ ವೇಗವಾಗಿ ಬಂದ ಲಾರಿ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಡಿಕ್ಕಿಯ ರಭಸಕ್ಕೆ ರಸ್ತೆಗೆ ಬಿದ್ದ ಅವರು ಲಾರಿಯ ಚಕ್ರಕ್ಕೆ ಸಿಲುಕಿದ್ದು, ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅಪಘಾತದ ತೀವ್ರತೆಯಿಂದ ಮೃತರ ಮುಖ ಹಾಗೂ ತಲೆಯ ಭಾಗಕ್ಕೆ ಗಂಭೀರ ಹಾನಿಯಾಗಿದ್ದರಿಂದ ಆರಂಭದಲ್ಲಿ ಅವರ ಗುರುತು ಪತ್ತೆಹಚ್ಚುವುದು ಕಷ್ಟವಾಗಿತ್ತು.
ಬಳಿಕ ಅವರ ಬಳಿಯಲ್ಲಿದ್ದ ವಸ್ತುಗಳ ಆಧಾರದ ಮೇಲೆ ಮೃತರ ಗುರುತು ಪತ್ತೆ ಮಾಡಲಾಗಿದೆ. ಘಟನೆಯ ಮಾಹಿತಿ ತಿಳಿದು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.