ಬಂಟ್ವಾಳ, ಸೆ.21 (DaijiworldNews/TA): ವ್ಯಕ್ತಿಯೋರ್ವರಿಗೆ ಚೂರಿಯಿಂದ ಇರಿದ ಘಟನೆ ಬಂಟ್ವಾಳ ತಾಲೂಕಿನ ಧನುಪೂಜೆ ಸಮೀಪದ ಕಮ್ಮಾಜೆಯಲ್ಲಿ ರವಿವಾರ ಸಂಜೆ ನಡೆದಿದೆ.

ಕಮ್ಮಾಜೆಯ ಮೂಡಾಯಿಕೋಡಿ ನಿವಾಸಿ ಪ್ರಶಾಂತ್ ಎಂಬವರು ಚೂರಿ ಇರಿತಕ್ಕೊಳಗಾಗಿದ್ದಾರೆ. ಮೇಸ್ತ್ರೀ ಪ್ರಶಾಂತ್ ಎಂಬಾತನೇ ಚೂರಿಯಿಂದ ಇರಿದಿದ್ದಾನೆ ಎಂದು ತಿಳಿದುಬಂದಿದೆ. ಘಟನೆಯಲ್ಲಿ ಗಾಯಗೊಂಡ ಪ್ರಶಾಂತ್ ಅವರನ್ನು ಚಿಕಿತ್ಸೆಗಾಗಿ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ಬಂಟ್ವಾಳ ಗ್ರಾಮಾಂತರ ಪೊಲೀಸರು ಪ್ರಕರಣದ ಕುರಿತು ತನಿಖೆ ಆರಂಭಿಸಿದ್ದಾರೆ. ಚೂರಿ ಇರಿತಕ್ಕೆ ನಿಖರ ಕಾರಣವೇನು ಎಂಬುದು ಪೊಲೀಸ್ ತನಿಖೆಯಿಂದ ತಿಳಿದುಬರಬೇಕಿದೆ.