ಪುತ್ತೂರು, ಅ.02 (DaijiworldNews/AK): ಕೆದಿಲದಲ್ಲಿ ಶನಿವಾರ ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ಲೈನ್ಮ್ಯಾನ್ ಸಾವನ್ನಪ್ಪಿದ್ದ ಘಟನೆ ಶನಿವಾರ ನಡೆದಿದೆ.

ಮೃತರನ್ನು ಕೆಮ್ಮಾಯಿ ನಿವಾಸಿ ರವಿ ಗೌಡ ಎಂದು ಗುರುತಿಸಲಾಗಿದೆ. ಅವರು ಕೆದಿಲ, ಪಾಟ್ರಕೋಡಿ, ಮಿತ್ತೂರು ಹಾಗೂ ಗಡಿಯಾರ ಭಾಗಗಳಲ್ಲಿ ಲೈನ್ಮ್ಯಾನ್ ಆಗಿ ಕೆಲಸ ಮಾಡುತ್ತಿದ್ದರು. ಶನಿವಾರ ಕರ್ತವ್ಯ ನಿರ್ವಹಿಸುತ್ತಿದ್ದಾಗ ರವಿ ಅವರಿಗೆ ವಿದ್ಯುತ್ ಸ್ಪರ್ಶಿಸಿ ಈ ಘಟನೆ ನಡೆದಿದೆ ಎಂದು ವರದಿಯಾಗಿದೆ.
ಗ್ರಾಮದಲ್ಲಿ ರವಿ ಸೇವ ಮನೋಭಾವದ ಸ್ವಭಾವಕ್ಕೆ ಹೆಸರುವಾಸಿಯಾಗಿದ್ದರು ಮತ್ತು ನಿವಾಸಿಗಳು ವಿದ್ಯುತ್ ಸಂಬಂಧಿತ ಸಮಸ್ಯೆಗಳ ಬಗ್ಗೆ ಕರೆ ಮಾಡಿದಾಗಲೆಲ್ಲಾ ತ್ವರಿತವಾಗಿ ಪ್ರತಿಕ್ರಿಯಿಸುತ್ತಿದ್ದರು ಎಂದು ವರದಿಯಾಗಿದೆ. ಸ್ಥಳೀಯ ಮೂಲಗಳ ಪ್ರಕಾರ, ಅವರು ತಕ್ಷಣ ಸ್ಥಳಕ್ಕೆ ತಲುಪಿ ಸಮಸ್ಯೆಯನ್ನು ಪರಿಹರಿಸಲು ಕ್ರಮ ಕೈಗೊಳ್ಳುತ್ತಿದ್ದರು. ಅವರ ಅಕಾಲಿಕ ನಿಧನ ಸ್ಥಳೀಯರಲ್ಲಿ ಆಘಾತ ಉಂಟು ಮಾಡಿದೆ.