ವಿಟ್ಲ, ಅ.06 (DaijiworldNews/TA): ಬ್ಯಾಂಕ್ನಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಇಬ್ಬರಿಂದ ಹಣ ಪಡೆದು ವಂಚಿಸಿದ ಪ್ರಕರಣದಲ್ಲಿ, ಸುಮಾರು 15 ವರ್ಷಗಳಿಂದ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿಯನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ. ಪುತ್ತೂರು ಬಲ್ಯ ನಿವಾಸಿ ಹಿಬ್ಬಾತುಲ್ಲ (52) ಬಂಧಿತ ಆರೋಪಿ.

ಬ್ಯಾಂಕ್ ನಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಇಬ್ಬರಿಂದ ಹಣ ಪಡೆದು, ಉದ್ಯೋಗ ಕೊಡಿಸದೇ ಹಾಗೂ ಹಣವನ್ನೂ ಹಿಂದಿರುಗಿಸದೇ ವಂಚಿಸಿದ ಆರೋಪಕ್ಕೆ ಸಂಬಂಧಿಸಿದಂತೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆದರೆ ಪ್ರಕರಣದ ವಿಚಾರಣೆಗೆ ನ್ಯಾಯಾಲಯಕ್ಕೆ ಹಾಜರಾಗದೆ ಸುಮಾರು 15 ವರ್ಷಗಳಿಂದ ಹಿಬ್ಬಾತುಲ್ಲ ತಲೆಮರೆಸಿಕೊಂಡಿದ್ದ.
ನ್ಯಾಯಾಲಯದ ವಾರೆಂಟ್ ಆಧರಿಸಿ ಕಾರ್ಯಾಚರಣೆ ನಡೆಸಿದ ವಿಟ್ಲ ಠಾಣೆಯ ಪೊಲೀಸರು, ಅಕ್ಟೋಬರ್ 5ರಂದು ಹಿಬ್ಬಾತುಲ್ಲನನ್ನು ದಸ್ತಗಿರಿ ಮಾಡಿದ್ದಾರೆ. ಬಳಿಕ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.