ಸುಳ್ಯ, ಅ.06 (DaijiworldNews/AA): ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರು ಪ್ರಯಾಣಿಸುತ್ತಿದ್ದ ಇನ್ನೋವಾ ಕಾರು ಕರಿಕ್ಕಳ - ನಿಂತಿಕಲ್ಲು ನಡುವಿನ ಮುಚ್ಚಿಲ ಎಂಬಲ್ಲಿ ಆಗಸ್ಟ್ 6ರ ಮಂಗಳವಾರ ಅಪಘಾತಕ್ಕೀಡಾಗಿದೆ.

ಘಟನೆಯಲ್ಲಿ ಶಾಸಕಿ ಯಾವುದೇ ಗಾಯಗಳಿಲ್ಲದೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.
ವರದಿಗಳ ಪ್ರಕಾರ, ಮುಚ್ಚಿಲ ಬಳಿ ಶಾಸಕರ ಕಾರಿನ ಮುಂದೆ ಚಲಿಸುತ್ತಿದ್ದ ವಾಹನವೊಂದು ಏಕಾಏಕಿ ಬ್ರೇಕ್ ಹಾಕಿದೆ. ಪರಿಣಾಮ ಶಾಸಕರ ಕಾರು ಮುಂದಿದ್ದ ಕಾರಿನ ಹಿಂಭಾಗಕ್ಕೆ ಡಿಕ್ಕಿ ಹೊಡೆದಿದೆ.
ಡಿಕ್ಕಿಯ ರಭಸಕ್ಕೆ ಇನ್ನೋವಾ ಕಾರಿನ ಮುಂಭಾಗ ನಜ್ಜುಗುಜ್ಜಾಗಿದೆ.