ಸುಳ್ಯ, ಅ.25 (DaijiworldNews/TA): ಇಂದು ಸಂಜೆ ಸುರಿದ ಭಾರೀ ಮಳೆಯಿಂದಾಗಿ ಬೊಳುಬೈಲು ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಳೆನೀರು ತುಂಬಿ ಹರಿದಿದೆ. ಹೆದ್ದಾರಿಯ ಮೇಲೆ ನೀರು ಹರಿಯುತ್ತಿದ್ದ ದೃಶ್ಯ ಕಂಡುಬಂದಿದ್ದು, ವಾಹನ ಸವಾರರು ಸಂಚರಿಸಲು ಕಷ್ಟಪಡುವಂತಾಯಿತು.

ಭಾರೀ ಮಳೆಯಿಂದಾಗಿ ರಸ್ತೆಯಲ್ಲಿ ನೀರು ನಿಂತು ಹರಿಯುವುದರಿಂದ ವಾಹನ ಸಂಚಾರಕ್ಕೆ ತೊಂದರೆಯಾಯಿತು. ಸ್ಥಳದಲ್ಲಿ ಮಳೆನೀರು ಸರಾಗವಾಗಿ ಹರಿದುಹೋಗಲು ಸೂಕ್ತ ಚರಂಡಿ ವ್ಯವಸ್ಥೆ ಕಲ್ಪಿಸುವ ಅಗತ್ಯವಿದೆ ಎಂಬುದು ಸಾರ್ವಜನಿಕರು ಒತ್ತಾಯಿಸಿದ್ದಾರೆ.