ಬೆಳ್ತಂಗಡಿ, ಅ.25 (DaijiworldNews/AA): ಸಾರ್ವಜನಿಕ ಸ್ಥಳದಲ್ಲಿ ಪರಿಶಿಷ್ಟ ಜಾತಿಯ ಮಹಿಳೆಯೊಂದಿಗೆ ಅಸಭ್ಯವಾಗಿ ಮಾತನಾಡುತ್ತ ಹಣದ ಆಮಿಷ ಒಡ್ಡಿ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೆರೆಗೆ 61 ವರ್ಷದ ವ್ಯಕ್ತಿಯೊಬ್ಬನನ್ನು ವೇಣೂರು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಸಂತ್ರಸ್ತೆ ನೀಡಿದ ದೂರಿನ ಪ್ರಕಾರ, ಶನಿವಾರ ಮಧ್ಯಾಹ್ನ ವೇಣೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅವರು ಕೆಲಸದಲ್ಲಿದ್ದಾಗ ಈ ಘಟನೆ ನಡೆದಿದೆ.
ಬೆಳ್ತಂಗಡಿ ವೇಣೂರು ನಿವಾಸಿ ಸೈಯ್ಯದ್ ಮಹಮ್ಮದ್ ಇಸಾಕ್ (61) ಎಂಬಾತ ದ್ವಿಚಕ್ರ ವಾಹನದಲ್ಲಿ ಬಂದು, ಸಾರ್ವಜನಿಕ ಸ್ಥಳದಲ್ಲಿ ಮಹಿಳೆಯೊಂದಿಗೆ ಅಸಭ್ಯವಾಗಿ ಮಾತನಾಡಿ, ಹಣದ ಆಮಿಷ ಒಡ್ಡಿ ಲೈಂಗಿಕ ಕಿರುಕುಳ ನೀಡಿದ್ದಾನೆ ಎನ್ನಲಾಗಿದೆ.
ಸಂತ್ರಸ್ತೆ ನೀಡಿದ ದೂರಿನ ಮೇರೆಗೆ ವೇಣೂರು ಪೊಲೀಸ್ ಠಾಣೆಯಲ್ಲಿ ಅ.ಕ್ರ 73/2026, ಕಲಂ: 75(1)(ii), 75(1)(iv), 79 ಬಿ.ಎನ್.ಎಸ್ 2023 ಮತ್ತು ಕಲಂ: 3(1)(r), 3(1)(w)(ii)̧ 3(2)(va) The SC & ST (Prevention of Atrocities) Amendment) Act 2015ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.
ಆರೋಪಿಯನ್ನು ವಶಕ್ಕೆ ಪಡೆದಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ತಿಳಿಸಿರುವ ಪೊಲೀಸರು, ಪ್ರಕರಣದ ತನಿಖೆ ಮುಂದುವರಿಸಿದ್ದಾರೆ.