ಮಂಗಳೂರು, ಅ.26 (DaijiworldNews/AA): ಸಿಎಂ ಡಿ.ಕೆ. ಶಿವಕುಮಾರ್ ಹಾಗೂ ಸಚಿವ ಜಮೀರ್ ಅಹ್ಮದ್ ಖಾನ್ ಅವರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂಬ ಆರೋಪದ ಮೇರೆಗೆ ನಟ ಧನ್ವೀರ್ ಅವರ ವಿರುದ್ಧ ಪ್ರಕರಣ ದಾಖಲಿಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ NSUI ದಕ್ಷಿಣ ಕನ್ನಡ ಜಿಲ್ಲಾ ಸಮಿತಿಯ ವತಿಯಿಂದ ಜಿಲ್ಲಾಧ್ಯಕ್ಷ ಸುಹಾನ್ ಆಳ್ವ ಅವರ ನೇತೃತ್ವದಲ್ಲಿ ಪೋಲಿಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಅವರಿಗೆ ಅಧಿಕೃತ ದೂರು ಸಲ್ಲಿಸಿ ಮನವಿ ಮಾಡಲಾಯಿತು.


ಈ ಸಂದರ್ಭದಲ್ಲಿ ಧನ್ವೀರ್ ಅವರ ಹೇಳಿಕೆಗಳ ಕುರಿತು ಸಮಗ್ರ ಹಾಗೂ ನಿಷ್ಪಕ್ಷಪಾತ ತನಿಖೆ ನಡೆಸಬೇಕು. ಕಾನೂನು ಉಲ್ಲಂಘನೆ ಕಂಡುಬಂದಲ್ಲಿ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಲಾಯಿತು.
ಈ ಸಂದರ್ಭದಲ್ಲಿ NSUI ಉಪಾಧ್ಯಕ್ಷರಾದ ಸುಖ್ವಿಂದರ್ ಸಿಂಗ್, ಶಾನ್ ಸಿರಿ, ಕೀರ್ತನ್ ಕೊಡಪಾಲ ಮುಖಂಡರಾದ ಕೌಶಿಕ್, ಸುಶಾನ್ ಹಾಗೂ ಏತಾನ್ ಉಪಸ್ಥಿತರಿದ್ದರು.