ಮಂಗಳೂರು, ಫೆ.21 (DaijiworldNews/PY): ದೇಶಾದ್ಯಂತ ಇಂದು ಮಹಾಶಿವರಾತ್ರಿ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದೆ. ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಶಿವ ದೇಗುಲದಲ್ಲೂ ಶಿವನಿಗೆ ವಿಶೇಷ ಪೂಜೆ, ಪುರಸ್ಕಾರ ನಡೆಯಿತು.




ಅಂತೆಯೇ ಮಂಗಳೂರಿನ ಇತಿಹಾಸ ಪ್ರಸಿದ್ಧ ಕದ್ರಿ ಮಂಜುನಾಥೇಶ್ವರ ದೇವಾಲಯದಲ್ಲೂ ಮಹಾಶಿವರಾತ್ರಿ ಮನೆ ಮಾಡಿದೆ. ಸಾವಿರಾರು ಭಕ್ತರು ದೇವಾಲಯಕ್ಕೆ ಆಗಮಿಸಿ ಶಿವನಿಗೆ ವಿಶೇಷ ಪೂಜೆ ಸಲ್ಲಿಸುತ್ತಿದ್ದಾರೆ.
ಇನ್ನು ಮಹಾಶಿವರಾತ್ರಿ ಪ್ರಯುಕ್ತ ದೇವಾಲಯ ಹೂವಿನ ಅಲಂಕಾರ ಹಾಗೂ ವಿದ್ಯುತ್ ದೀಪಗಳಿಂದ ಕಂಗೊಳಿಸುತ್ತಿದೆ. ಶಿವರಾತ್ರಿ ಹಿನ್ನೆಲೆಯಲ್ಲಿ ಇಂದು ಮುಂಜಾನೆ ನಾಲ್ಕು ಗಂಟೆಯಿಂದಲೇ ವಿಶೇಷ ಪೂಜೆ ನಡೆಯುತ್ತಿದ್ದು, ನಾಳೆ ಮಧ್ಯಾಹ್ನದವರೆಗೆ ವಿಶೇಷ ಪೂಜೆ ನಡೆಯಲಿದೆ.