ಕಾಸರಗೋಡು, ನ. 01 (DaijiworldNews/MB) : ಜಿಲ್ಲಾ ಸೈಬರ್ ಕ್ರೈಂ ಪೊಲೀಸ್ ಠಾಣೆಯನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಉದ್ಘಾಟಿಸಿದರು.





ಸೈಬರ್ ಅಪರಾಧಗಳಿಗೆ ಶಿಕ್ಷೆ ಖಾತರಿಪಡಿಸಲು ಪೊಲೀಸ್ ಕಾಯ್ದೆಯಲ್ಲಿ ಬದಲಾವಣೆ ತರಲಾಗುವುದು ಎಂದು ಮುಖ್ಯಮಂತ್ರಿ ಹೇಳಿದರು.
ಸಾಮಾಜಿಕ ಜಾಲ ತಾಣಗಳ ಮೂಲಕ ಮಕ್ಕಳು, ಮಹಿಳೆಯರ ಮೇಲೆ ಅವಹೇಳನಗಳು ಹೆಚ್ಚುತ್ತಿವೆ. ಇದನ್ನು ಗಂಭೀರವಾಗಿ ತೆಗೆದುಕೊಳ್ಳಲಾಗುವುದು. ಸಾಮಾಜಿಕ ಜಾಲ ತಾಣಗಳ ದುರುಪಯೋಗವನ್ನು ತಡೆಗಟ್ಟುವುದು ಅನಿವಾರ್ಯ ಎಂದು ಹೇಳಿದರು.
ರಾಜ್ಯ ಪೊಲೀಸ್ ಮಹಾನಿರ್ದೇಶಕ ಲೋಕನಾಥ ಬೆಹ್ರಾ, ಎ ಡಿ ಜಿ ಪಿ ಮನೋಜ್ ಅಬ್ರಹಾಂ, ಡಾ. ಶೇಕ್ ದರ್ವೇಶ್ ಸಾಹೇಬ್, ಪಿ. ವಿಜಯನ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಿ. ಶಿಲ್ಪಾ, ಎಎಸ್ಪಿ ಕ್ಷೇವಿಯರ್ ಸೆಬಾಸ್ಟಿಯನ್, ಸ್ಪೆಷಲ್ ಬ್ರಾಂಚ್ ಡಿವೈಎಸ್ಪಿ ಹರೀಶ್ಚ೦ದ್ರ ನಾಯ್ಕ್ ಹಾಗೂ ಇತರ ಪೊಲೀಸ್ ಅಧಿಕಾರಿಗಳು ಉಪಸ್ಥಿತರಿದ್ದರು.