ಮಂಗಳೂರು, ಫೆ. 12 (DaijiworldNews/SM): ದಕ್ಷಿಣ ಕನ್ನಡ ಆರೋಗ್ಯ ಬುಲೆಟಿನ್ ಪ್ರಕಾರ ಜಿಲ್ಲೆಯಲ್ಲಿ ಶುಕ್ರವಾರ 33 ಹೊಸ ಕೊರೋನಾ ವೈರಸ್ ಪ್ರಕರಣಗಳು ವರದಿಯಾಗಿದ್ದು, ಆ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 34,118 ಕ್ಕೆ ಏರಿಕೆಯಾಗಿದೆ. ಈ ಪೈಕಿ 334 ಪ್ರಕರಣಗಳು ಪ್ರಸ್ತುತ ಸಕ್ರಿಯವಾಗಿವೆ.
![](https://daijiworld.ap-south-1.linodeobjects.com/iWeb/tvdaijiworld/img_tv247/santhu-4.1.2021-covid.jpg)
ಒಟ್ಟು 5,41,519 ಮಾದರಿಗಳನ್ನು ಪರೀಕ್ಷಿಸಲಾಗಿದ್ದು, ಅದರಲ್ಲಿ 5,07,440 ಮಂದಿಯ ವರದಿ ನೆಗೆಟಿವ್ ಆಗಿದೆ. ಒಟ್ಟು 31 ಜನರನ್ನು ಬಿಡುಗಡೆ ಮಾಡಲಾಗಿದ್ದು, ಒಟ್ಟು ಗುಣಮುಖರಾದವರ ಸಂಖ್ಯೆ 33,077ಕ್ಕೆ ತಲುಪಿದೆ. ಈವರೆಗೆ ಒಟ್ಟು 740 ಸಾವುಗಳು ಸಂಭವಿಸಿವೆ.
ಉಡುಪಿ ಜಿಲ್ಲೆಯ ಇಂದಿನ ಕೊರೋನಾ ವರದಿ:
ಶುಕ್ರವಾರ 12 ಹೊಸ ಪ್ರಕರಣಗಳು ಸೇರಿದಂತೆ ಜಿಲ್ಲೆಯ ಕೊರೋನಾ ವೈರಸ್ ಪ್ರಕರಣಗಳ ಸಂಖ್ಯೆ 23,444ಕ್ಕೆ ಏರಿಕೆಯಾಗಿದೆ. ಈ ಪೈಕಿ 59 ಪ್ರಕರಣಗಳು ಪ್ರಸ್ತುತ ಸಕ್ರಿಯವಾಗಿವೆ.
ಈವರೆಗೆ 3,48,280ಕ್ಕೂ ಹೆಚ್ಚು ಮಾದರಿಗಳನ್ನು ಪರೀಕ್ಷಿಸಲಾಗಿದ್ದು, ಅದರಲ್ಲಿ 3,24,836 ಮಾದರಿಗಳು ನಕಾರಾತ್ಮಕವಾಗಿವೆ. ಶುಕ್ರವಾರ ಐದು ರೋಗಿಗಳನ್ನು ಬಿಡುಗಡೆ ಮಾಡಲಾಗಿದೆ. ಒಟ್ಟು ಗುಣಮುಖರಾದವರ ಸಂಖ್ಯೆ 23,196ಕ್ಕೆ ಏರಿಕೆಯಾಗಿದೆ. ಈವರೆಗೆ ಒಟ್ಟು 189 ಸಾವುಗಳು ಸಂಭವಿಸಿವೆ.