ಬಂಟ್ವಾಳ, ಜ 15(SM): ಯುವಕನೊಬ್ಬ ರೈಲಿನಡಿಗೆ ತಲೆಯಿಟ್ಟು ಆತ್ಮಹತ್ಯೆ ಮಾಡಿಕೊಂಡ ಘಟನೆ ಬಂಟ್ವಾಳ ತಾಲೂಕಿನ ಗೋಳ್ತಮಜಲು ಎಂಬಲ್ಲಿ ನಡೆದಿದೆ. ಮೃತರನ್ನು ಬಾಯಿಲ ನಿವಾಸಿ ಚಂದಪ್ಪ ಗೌಡ ಎಂಬವರ ಪುತ್ರ ದಿವಾಕರ (35) ಎಂದು ಗುರುತಿಸಲಾಗಿದೆ.

ಸುಬ್ರಹ್ಮಣ್ಯದಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ರೈಲಿಗೆ ಮಧ್ಯಾಹ್ನ 1.30ರ ಸುಮಾರಿಗೆ ತಲೆ ಇಟ್ಟು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.
ಘಟನಾ ಸ್ಥಳಕ್ಕೆ ಬಂಟ್ವಾಳ ನಗರ ಠಾಣೆಯ ಹರೀಶ್, ಚಂದ್ರಶೇಖರ್, ಸಿಬ್ಬಂದಿ ಸುರೇಶ್, ಉಮೇಶ್ ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.