ಮಂಜೇಶ್ವರ, ಮಾ 12(SM): ಟ್ಯಾಂಕರ್ ನಿಂದ ಅನಿಲ ಸೋರಿಕೆಯಾಗಿರುವ ಘಟನೆ ಮಂಜೇಶ್ವರ ಸಮೀಪದ ತಲಪಾಡಿ ಆರ್ ಟಿ ಒ ಚೆಕ್ ಪೋಸ್ಟ್ ಬಳಿ ನಡೆದಿದೆ.

ಸಾಂದರ್ಭಿಕ ಚಿತ್ರ
ಮಂಗಳೂರಿನಿಂದ ಕೇರಳಕ್ಕೆ ಗ್ಯಾಸ್ ಸಾಗಾಟ ನಡೆಸುತ್ತಿದ್ದ ಟ್ಯಾಂಕರ್ ಚೆಕ್ ಪೋಸ್ಟ್ ಬಳಿ ನಿಲುಗಡೆಗೊಳಿಸಲಾಗಿತ್ತು. ಈ ಸಂದರ್ಭ ಏಕಾಏಕಿ ಟ್ಯಾಂಕರ್ ನಿಂದ ಅನಿಲ ಸೋರಿಕೆ ಆರಂಭಗೊಂಡಿದೆ. ಸುದ್ದಿ ತಿಳಿಯುತ್ತಿದ್ದಂತೆ ಸಂಚಾರಿ ಠಾಣಾ ಪೊಲೀಸರು ಕಾರ್ಯ ಪ್ರವೃತರಾಗಿದ್ದಾರೆ. ಹಾಗೂ ಕಾಸರಗೋಡು -ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರವನ್ನು ಸ್ಥಗಿತಗೊಳಿಸಿದ್ದಾರೆ.
ಬದಲಿ ಮಾರ್ಗವಾಗಿ ಸಂಚಾರಕ್ಕೆ ಪೊಲೀಸರು ವ್ಯವಸ್ಥೆ ಮಾಡಿದ್ದಾರೆ. ಸೋರಿಕೆ ತಡೆಗೆ ಕಾರ್ಯಾಚರಣೆ ಮುಂದುವರೆದಿದೆ.