ಬಂಟ್ವಾಳ, ಮೇ.25 (DaijiworldNews/AA): ಎರಡು ಬೈಕ್ ಹಾಗೂ ಪಿಕಪ್ ವಾಹನಗಳ ನಡುವೆ ಸರಣಿ ಅಪಘಾತ ಸಂಭವಿಸಿದ ಪರಿಣಾಮ ಬೈಕ್ ಸವಾರರಿಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಬಂಟ್ವಾಳ ತಾಲೂಕಿನ ಕಾವಳಪಡೂರಿನ ವಗ್ಗ ಎಂಬಲ್ಲಿ ಬಿಸಿರೋಡು - ಕಡೂರು ರಾಜ್ಯ ಹೆದ್ದಾರಿಯಲ್ಲಿ ನಡೆದಿದೆ.
![](https://daijiworld.ap-south-1.linodeobjects.com/Linode/img_tv247/AA-250524-accident1.jpg)
![](https://daijiworld.ap-south-1.linodeobjects.com/Linode/img_tv247/AA-250524-accident2.jpg)
ಬೈಕ್ ಸವಾರರಾದ ಗುಣವಂತ ಮತ್ತು ಶಮೀರ್ ಎಂಬವರು ಗಾಯಗೊಂಡಿದ್ದಾರೆ.
ಬೆಳ್ತಂಗಡಿ ಕಡೆಯಿಂದ ಬರುತ್ತಿದ್ದ ಬೈಕ್ ಸವಾರ ಗುಣವಂತ ಎಂಬವರು ಬಿಸಿರೋಡು ಕಡೆಯಿಂದ ಬರುತ್ತಿದ್ದ ಪಿಕಪ್ ವಾಹನಕ್ಕೆ ಎದುರಿನಿಂದ ಡಿಕ್ಕಿ ಹೊಡೆದಿದ್ದಾನೆ. ಇದೇ ವೇಳೆ ಪಿಕಪ್ ವಾಹನದ ಹಿಂಬದಿಯಿಂದ ಬರುತ್ತಿದ್ದ ಬೈಕ್ ಸವಾರ ಶಮೀರ್ ಹಿಂದಿನಿಂದ ಡಿಕ್ಕಿ ಹೊಡೆದಿದ್ದಾನೆ. ಡಿಕ್ಕಿಯ ರಭಸಕ್ಕೆ ಎರಡು ಬೈಕ್ ಸವಾರರು ರಸ್ತೆಗೆ ಎಸೆಯಲ್ಪಟ್ಟಿದ್ದಾರೆ.
ಅಪಘಾತದಲ್ಲಿ ಇಬ್ಬರು ಸವಾರರು ಗಾಯಗೊಂಡಿದ್ದು, ಅವರನ್ನು ಬಂಟ್ವಾಳ ಸರಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನು ಘಟನಾ ಸ್ಥಳಕ್ಕೆ ಬಂಟ್ವಾಳ ಟ್ರಾಫಿಕ್ ಪೋಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.