ಮಂಗಳೂರು: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಜುಲೈ 18 ಮತ್ತು 19 ರಂದು ಭಾರೀ ಮಳೆಯಾಗುವ ಸಂಭವವಿದ್ದು ರೆಡ್ ಅಲರ್ಟ್ ಘೋಷಿಸಲಾಗಿದೆ.

ಮುಂದಿನ ಎರಡು ದಿನಗಳು ಉಭಯ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹೀಗಾಗಿ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ಜು.18 ಮತ್ತು 19 ರಂದು ರೆಡ್ ಅಲರ್ಟ್ ಘೋಷಿಸಿದೆ.
ಇಂದು ಎರಡೂ ಜಿಲ್ಲೆಯಾದ್ಯಂತ ದಿನವಿಡೀ ಉತ್ತಮ ಮಳೆಯಾಗುತ್ತಿದೆ. ಮುಂದಿನ ಎರಡು ದಿನಗಳು ಕೂಡ ಭಾರಿ ಮಳೆಯಾಗಲಿದೆ. ಇನ್ನು ಈಗಾಗಲೇ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಸುರಿದ ಭಾರೀ ಮಳೆಗೆ ಹಲವಾರು ಅವಾಂತರ ಸೃಷ್ಟಿಯಾಗಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ.