ನವದೆಹಲಿ, ಡಿ.25(DaijiworldNews/TA): ಭಾರತದ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಭಾರತ ರತ್ನವನ್ನು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಒಡಿಶಾದ ಮಾಜಿ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಅವರಿಗೆ ನೀಡಬೇಕು ಎಂದು ಕೇಂದ್ರ ಸಚಿವ ಗಿರಿರಾಜ್ ಸಿಂಗ್ ಬುಧವಾರ ಹೇಳಿದ್ದಾರೆ.

ಸಿಂಗ್ ಅವರು ತಮ್ಮ ಲೋಕಸಭಾ ಕ್ಷೇತ್ರವಾದ ಬೇಗುಸರಾಯ್ನಲ್ಲಿ ಬಿಜೆಪಿಯ ಪ್ರಸ್ತುತ ಮಿತ್ರರಾದ ನಿತೀಶ್ ಕುಮಾರ್ ಮತ್ತು ಈ ವರ್ಷದ ಆರಂಭದಲ್ಲಿ ಬಿಜೆಪಿ ಅಧಿಕಾರದಿಂದ ಹೊರಹಾಕಲ್ಪಟ್ಟ ಮಾಜಿ ಮೈತ್ರಿ ಪಾಲುದಾರ ನವೀನ್ ಪಟ್ನಾಯಕ್ ಅವರನ್ನು ಹೊಗಳಿದರು.
ರಾಜ್ಯವನ್ನು ತ್ತರಕ್ಕೆ ಕೊಂಡೊಯ್ದ ನಿತೀಶ್ ಕುಮಾರ್ ಅಧಿಕಾರಕ್ಕೆ ಏರುವವರೆಗೂ ಬಿಹಾರ ಹದಗೆಟ್ಟ ರಸ್ತೆಗಳು, ಶಾಲೆಗಳು ಮತ್ತು ಕಟ್ಟಡಗಳಿಗೆ ಹೆಸರುವಾಸಿಯಾಗಿತ್ತು. ಹಾಗೆಯೇ ನವೀನ್ ಪಟ್ನಾಯಕ್ ಒಡಿಶಾಗೆ ಹಲವು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದಾರೆ. ಅವರಂತಹ ನಾಯಕರು ಭಾರತ ರತ್ನದಂತಹ ಅತ್ಯುನ್ನತ ಗೌರವಕ್ಕೆ ಅರ್ಹರು” ಎಂದು ಸಚಿವ ಗಿರಿರಾಜ್ ಸಿಂಗ್ ಹೇಳಿದ್ದಾರೆ.