ನವದೆಹಲಿ, ಏ.06 (DaijiworldNews/AA): ತಮಿಳುನಾಡಿನ ರಾಮೇಶ್ವರಂನಲ್ಲಿ ರಾಮನವಮಿಯಂದು ಪ್ರಧಾನಿ ನರೇಂದ್ರ ಮೋದಿ ಅವರು ಭಾರತದ ಮೊದಲ ವರ್ಟಿಕಲ್ ಲಿಫ್ಟ್ ಸಮುದ್ರ ಸೇತುವೆಯನ್ನು ಉದ್ಘಾಟನೆ ಮಾಡಲಿದ್ದಾರೆ.

ಪಂಬನ್ ಮತ್ತು ರಾಮೇಶ್ವರಂ ನಡುವಿನ ದೇಶದ ಮೊದಲ ವರ್ಟಿಕಲ್ ಲಿಫ್ಟ್ ಸಮುದ್ರ ಸೇತುವೆಯನ್ನು 550 ಕೋಟಿ ರೂ.ಗಳಿಗೂ ಹೆಚ್ಚು ವೆಚ್ಚದಲ್ಲಿ ನಿರ್ಮಾಣ ಮಾಡಲಾಗಿದೆ. ಈ ಸೇತುವೆಯನ್ನು ಮಧ್ಯಾಹ್ನ 12 ಗಂಟೆಗೆ ಮೋದಿ ಉದ್ಘಾಟಿಸಲಿದ್ದಾರೆ. ಆ ಮೂಲಕ ಅವರು ರಸ್ತೆ ಸೇತುವೆಯಿಂದ ರೈಲು ಮತ್ತು ಹಡಗು ಸಂಚಾರಕ್ಕೆ ಹಸಿರು ನಿಶಾನೆ ತೋರಲಿದ್ದಾರೆ. ನಂತರ ಸೇತುವೆಯ ಕಾರ್ಯಾಚರಣೆಯನ್ನು ವೀಕ್ಷಿಸಲಿದ್ದಾರೆ.
ವರ್ಟಿಕಲ್ ಲಿಫ್ಟ್ ಸಮುದ್ರ ಸೇತುವೆಯ ಉದ್ದ 2.08 ಕಿಲೋಮೀಟರ್. ಇದು 99 ಸ್ಪ್ಯಾನ್ಗಳನ್ನು ಮತ್ತು 72.5 ಮೀಟರ್ಗಳ ವರ್ಟಿಕಲ್ ಲಿಫ್ಟ್ ಸ್ಪ್ಯಾನ್ ಅನ್ನು ಹೊಂದಿದೆ ಮತ್ತು 17 ಮೀಟರ್ ಎತ್ತರಕ್ಕೆ ಏರುತ್ತದೆ.