ಬೆಂಗಳೂರು, ಏ.24 (DaijiworldNews/AK): ಪಹಲ್ಗಾಮ್ ನಲ್ಲಿ ಭಯೋತ್ಪಾದಕ ದಾಳಿ ಸಂಬಂಧ ಸಾಮಾಜಿಕ ತಾಣಗಳಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಭಾರೀ ಚರ್ಚೆಗಳು ನಡೆಯುತ್ತಿವೆ.

ಇನ್ನೊಂದೆಡೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿದೇಶಗಳಿಗೆ ಹೋದಾಗಲೆಲ್ಲಾ ಕಾಶ್ಮೀರದಲ್ಲಿ ಒಂದಲ್ಲಾ ಒಂದು ದಾಳಿ ನಡೆಯುತ್ತದೆ ಎಂದು ಕರ್ನಾಟಕ ಬಿಜೆಪಿ ಐಟಿ ಸೆಲ್ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದ್ದು, ಭಾರೀ ವಿವಾದಕ್ಕೀಡಾಗಿದೆ.
ಈ ಸಂಬಂಧ ಕರ್ನಾಟಕ ಪ್ರದೇಶ ಕಾಂಗ್ರೆಸ್ ಕಮಿಟಿಯ ಕಾನೂನು ಮತ್ತು ಮಾನವ ಹಕ್ಕುಗಳ ಘಟಕದ ಅಧ್ಯಕ್ ಸಿ.ಎಂ. ಧನಂಜಯ ಅವರು ದೂರು ನೀಡಿದ್ದು, ಈ ದೂರಿನ ಮೇರೆಗೆ ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಬಿಜೆಪಿ ಐಟಿ ಸೆಲ್ ವಿರುದ್ಧ ಎಫ್ಐಆರ್ ದಾಖಲಾಗಿದೆ.