ಬೆಳಗಾವಿ,ಏ.28 (DaijiworldNews/AK):ರಾಜ್ಯದಲ್ಲಿ ಬಿಜೆಪಿಯವರಿಗೆ ಒಂದೇ ಒಂದು ಸಭೆ ಮಾಡಲು ಬಿಡಲ್ಲ. ಇದು ಕಾಂಗ್ರೆಸ್ ಪಕ್ಷದ ಪ್ರತಿಜ್ಞೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಬಿಜೆಪಿ ನಾಯಕರಿಗೆ ಎಚ್ಚರಿಕೆ ಕೊಟ್ಟಿದ್ದಾರೆ.

ಸಿಎಂ ಸಿದ್ದರಾಮಯ್ಯ ಭಾಷಣದ ವೇಳೆ ಬಿಜೆಪಿ ಕಾರ್ಯಕರ್ತರು ಕಪ್ಪು ಪಟ್ಟಿ ಪ್ರದರ್ಶಿಸಿ ಅಡ್ಡಿ ವಿಚಾರವಾಗಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಿಜೆಪಿ ನಾಯಕರಿಗೆ ಒಂದು ಹೇಳಲು ಬಯಸುತ್ತೇನೆ. ನೀವು ಒಂದು ಸಭೆ ಮಾಡಲು ಬಿಡಲ್ಲ. ನಾನು ಕಾರ್ಯಕರ್ತರಿಗೆ ಒಂದು ಸಂದೇಶ ಕೊಡುತ್ತೇವೆ. ಇದೇ ವರ್ತನೆ ಮುಂದುವರಿಸಿದರೆ ಹುಷಾರ್ ಎಂದು ವಾರ್ನಿಂಗ್ ಕೊಟ್ಟರು.ನಿಮಗಿಂತ ಕಾರ್ಯರೂಪ ಮಾಡುವ ಶಕ್ತಿ ಜನ ನನಗೆ ಕೊಟ್ಟಿದ್ದಾರೆ. ಬಿಜೆಪಿ ಕಾರ್ಯಕರ್ತರಿಗೆ ಬುದ್ದಿವಾದ ಹೇಳಿದ್ರೆ ಸರಿ, ಇದು ವಾರ್ನಿಂಗ್ ಎಂದು ಖಡಕ್ ಸಂದೇಶ ಕೊಟ್ಟರು.