ಬೆಂಗಳೂರು, ಮೇ. 08 (DaijiworldNews/TA): ಭಾರತೀಯ ಸೇನೆ ನಡೆಸಿದ್ದ ಆಪರೇಷನ್ ಸಿಂಧೂರ್ ಕಾರ್ಯಾಚರಣೆಗೆ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಆಪರೇಷನ್ ಸಿಂಧೂರ್ ಅಡಿಯಲ್ಲಿ ಭಾರತ ನಡೆಸಿದ ಮಿಲಿಟರಿ ಪ್ರತಿಕ್ರಿಯೆಯ ನಂತರ ಪ್ರಧಾನಿಯವರ ನಾಯಕತ್ವದ ಬಗ್ಗೆ ಮಾಜಿ ಪ್ರಧಾನಿ ಮತ್ತು ಜನತಾದಳ (ಜಾತ್ಯತೀತ) ಅಧ್ಯಕ್ಷ ಎಚ್ಡಿ ದೇವೇಗೌಡರು ಗುರುವಾರ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬರೆದ ವೈಯಕ್ತಿಕ ಪತ್ರದಲ್ಲಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ .
ಕಳೆದ ಎರಡು ವಾರಗಳಿಂದ ನೀವು ಬಹಳ ಒತ್ತಡ ಮತ್ತು ಸಂಯಮದಿಂದ ಕರ್ತವ್ಯ ನಿರ್ವಹಿಸುತ್ತಿದ್ದೀರಿ. ದೇವರು ನಿಮಗೆ ದುಷ್ಟ ಜನರನ್ನು ಹತ್ತಿಕ್ಕುವ ಶಕ್ತಿಯನ್ನು ನೀಡಲಿ. ದೇಶ ಎದುರಿಸುತ್ತಿರುವ ಎಲ್ಲಾ ಸಮಸ್ಯೆಗಳನ್ನೂ ನಿವಾರಿಸುವ ಶಕ್ತಿ ನಿಮಗೆ ಸಿಗಲಿ. ಕಠಿಣ ಸಂದರ್ಭದಲ್ಲಿ ದೇಶದ ನಾಯಕತ್ವ ವಹಿಸಿರುವ ನಿಮ್ಮ ಹೆಸರು ಇತಿಹಾಸದಲ್ಲಿ ಪ್ರಕಾಶಮಾನವಾಗಿ ದಾಖಲಾಗಲಿದೆ ಎಂಬುವುದಾಗಿ ದೇವೇಗೌಡರು ಪತ್ರದಲ್ಲಿ ಉಲ್ಲೇಖಿಸಿದ್ದಾರೆ ಎನ್ನಲಾಗಿದೆ.