ಮಡಿಕೇರಿ, ಮೇ. 09 (DaijiworldNews/TA): ಕೊಡಗು ಜಿಲ್ಲೆ ಕುಶಾಲನಗರ ತಾಲೂಕಿನ ಹಾರಂಗಿ ಜಲಾಶಯದಲ್ಲಿ ಕಟ್ಟೆಚ್ಚರ ವಹಿಸಲಾಗಿದೆ ಎಂದು ವರದಿಯಾಗಿದೆ.

ಭಾರತ ಮತ್ತು ಪಾಕಿಸ್ತಾನ ನಡುವಿನ ಉದ್ವಿಗ್ನ ಪರಿಸ್ಥಿತಿ ಹಿನ್ನೆಲೆಯಲ್ಲಿ ಆಡಳಿತ, ಡ್ಯಾಂಗೆ ಬಿಗಿ ಭದ್ರತೆ ಕಲ್ಪಿಸಲಾಗಿದೆ. ಹಾರಂಗಿ ಜಲಾಶಯಕ್ಕೆ ಪ್ರವಾಸಿಗರ ಪ್ರವೇಶ ನಿರ್ಬಂಧಿಸಿ ನೀರಾವರಿ ಇಲಾಖೆ ಆದೇಶವನ್ನು ಹೊರಡಿಸಿದೆ. ಹೆಚ್ಚಿನ ಭದ್ರತಾ ಸಿಬ್ಬಂದಿ ನಿಯೋಜನೆ ಮಾಡಲಾಗಿದೆ.
ಭಾರತದ ಪ್ರತೀಕಾರದ ಕ್ರಮದಿಂದಾಗಿ ಪಾಕಿಸ್ತಾನದಲ್ಲಿ ಭೀತಿ ಉಂಟಾಗಿದೆ. ಸೇನಾ ಶಿಬಿರಗಳಿಂದ ಜನರನ್ನು ಸ್ಥಳಾಂತರಿಸುವ ಕೆಲಸವೂ ನಡೆಯುತ್ತಿದೆ. ವಾಸ್ತವವಾಗಿ, ಪಾಕಿಸ್ತಾನದ ದಾಳಿಯನ್ನು ವಿಫಲಗೊಳಿಸಿದ ನಂತರ, ಭಾರತವು ಲಾಹೋರ್, ಇಸ್ಲಾಮಾಬಾದ್, ಕರಾಚಿ, ಸಿಯಾಲ್ಕೋಟ್, ಬಹಾವಲ್ಪೂರ್ ಮತ್ತು ಪೇಶಾವರ್ ಸೇರಿದಂತೆ ಪಾಕಿಸ್ತಾನದ ಹಲವು ನಗರಗಳ ಮೇಲೆ ಪ್ರತೀಕಾರ ತೀರಿಸಿಕೊಂಡಿದೆ. ಭಾರತ ಮತ್ತು ಪಾಕಿಸ್ತಾನ ನಡುವಿನ ಉದ್ವಿಗ್ನ ಪರಿಸ್ಥಿತಿ ಹಿನ್ನೆಲೆಯಲ್ಲಿ ಆಡಳಿತ, ಹಾರಂಗಿ ಜಲಾಶಯಕ್ಕೆ ಬಿಗಿ ಭದ್ರತೆ ಕಲ್ಪಿಸಲಾಗಿದೆ.