ನವದೆಹಲಿ, ಮೇ. 09 (DaijiworldNews/TA): ಭಾರತ-ಪಾಕಿಸ್ತಾನ ಮಿಲಿಟರಿ ಸಂಘರ್ಷದ ಮಧ್ಯೆ ಕೇಂದ್ರ ಆರೋಗ್ಯ ಸಚಿವ ಜೆ.ಪಿ. ನಡ್ಡಾ ಅವರು ಶುಕ್ರವಾರ ದೇಶದಾದ್ಯಂತದ ಆಸ್ಪತ್ರೆಗಳಲ್ಲಿ ಆರೋಗ್ಯ ಮೂಲಸೌಕರ್ಯ ಸಿದ್ಧತೆಯನ್ನು ಪರಿಶೀಲಿಸಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ. ನಡ್ಡಾ ಮತ್ತು ಅವರ ತಂಡವು ದೇಶಾದ್ಯಂತ ಆಸ್ಪತ್ರೆಗಳು ಮತ್ತು ಆರೋಗ್ಯ ಸೌಲಭ್ಯಗಳ ಬಗೆಗೆ ಪರಿಶೀಲಿಸಿದೆ ಎಂದು ಹೇಳಲಾಗಿದೆ.

ಆಪರೇಷನ್ ಸಿಂಧೂರ್ ಹಿನ್ನೆಲೆಯಲ್ಲಿ, ಪ್ರಧಾನಿ ನರೇಂದ್ರ ಮೋದಿ ಗುರುವಾರ ವಿವಿಧ ಸಚಿವಾಲಯಗಳ ಕಾರ್ಯದರ್ಶಿಗಳೊಂದಿಗೆ ಉನ್ನತ ಮಟ್ಟದ ಸಭೆಯ ಅಧ್ಯಕ್ಷತೆ ವಹಿಸಿ, ರಾಷ್ಟ್ರೀಯ ಭದ್ರತೆ ಮತ್ತು ಕಾರ್ಯಾಚರಣೆಯ ಸನ್ನದ್ಧತೆಗೆ ಸರ್ಕಾರದ ಬದ್ಧತೆಯನ್ನು ಪುನರುಚ್ಚರಿಸುತ್ತಾ, ನಿರಂತರ ಜಾಗರೂಕತೆ ಮತ್ತು ಸ್ಪಷ್ಟ ಸಂವಹನಕ್ಕಾಗಿ ಕರೆ ನೀಡಿದರು.