ನವದೆಹಲಿ, ಮೇ. 09 (DaijiworldNews/AA): ಅಕ್ರಮವಾಗಿ ಭಾರತಕ್ಕೆ ನುಸುಳುತ್ತಿದ್ದ ಜೈಶ್-ಎ-ಮೊಹಮ್ಮದ್ ಸಂಘಟನೆಯ 7 ಉಗ್ರರನ್ನು ಜಮ್ಮು ಮತ್ತು ಕಾಶ್ಮೀರದ ಸಾಂಬಾದಲ್ಲಿ ಭಾರತದ ಗಡಿ ಭದ್ರತಾ ಪಡೆ ಹೊಡೆದುರುಳಿಸಿದೆ ಎಂದು ಬಿಎಸ್ಎಫ್ ವಕ್ತಾರರು ತಿಳಿಸಿದ್ದಾರೆ.

ಗುರುವಾರ ರಾತ್ರಿ ಸಾಂಬಾ ಸೆಕ್ಟರ್ನಲ್ಲಿ ಉಗ್ರರು ಒಳನುಸುಳಲು ಯತ್ನಿಸುತ್ತಿದ್ದರು. ಉಗ್ರರ ಚಲನವಲನವನ್ನು ಗಮನಿಸಿದ ಸೇನೆಯು ಕಾರ್ಯಾಚರಣೆ ಆರಂಭಿಸಿ ಒಳನುಸುಳುವಿಕೆ ಪ್ರಯತ್ನವನ್ನು ವಿಫಲಗೊಳಿಸಿದೆ. ಈ ಸಂದರ್ಭ ಉಗ್ರರು ಹಾಗೂ ಸೇನಾ ಪಡೆಗಳ ನಡುವೆ ಗುಂಡಿನ ಚಕಮಕಿ ನಡೆಯಿತು ಎಂದು ಬಿಎಸ್ಎಫ್ ತನ್ನ ಅಧಿಕೃತ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿದೆ.
ಅಂತಾರಾಷ್ಟ್ರೀಯ ಗಡಿಯನ್ನು ಅಕ್ರಮವಾಗಿ ಪ್ರವೇಶಿಸಲು ಯತ್ನಿಸುತ್ತಿದ್ದ 7 ಉಗ್ರರನ್ನು ಬಿಎಸ್ಎಫ್ ಯೋಧರು ಹೊಡೆದುರುಳಿಸಿರುವ ವಿಡಿಯೋವನ್ನು, ಬಿಎಸ್ಎಫ್ ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದೆ.