ಬೆಂಗಳೂರು, ಜೂ. 04 (DaijiworldNews/AK): ಅಹ್ಮದಾಬಾದ್ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಮಂಗಳವಾರ ರಾತ್ರಿ ನಡೆದ ಐಪಿಎಲ್ ಫೈನಲ್ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ 6 ರನ್ಗಳ ರೋಚಕ ಜಯ ಗಳಿಸಿ ಚಾಂಪಿಯನ್ ಆಗಿ ಹೊರಹೊಮ್ಮಿರುವ ಆರ್ಸಿಬಿ ತಂಡದ ಆಟಗಾರರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿನಂದನೆ ಸಲ್ಲಿಸಿದ್ದಾರೆ.

ವಿಧಾನಸೌಧದ ಭವ್ಯ ಮೆಟ್ಟಿಲುಗಳ ಮೇಲೆ ಏರ್ಪಡಿಸಿದ್ದ ಅಭಿನಂದನಾ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಂಡದ ಆಟಗಾರರಾದ ವಿರಾಟ್ ಕೊಹ್ಲಿ, ರಜತ್ ಪಾಟಿದಾರ್, ಕೃನಾಲ್ ಪಾಂಡ್ಯ ಮಾಯಾಂಕ್ ಅಗರ್ವಾಲ್ ಸೇರಿದಂತೆ ಎಲ್ಲ ಆಟಗಾರರಿಗೆ ಮೈಸೂರು ಪೇಟ ತೊಡಿಸಿ, ಶಾಲು ಹೊದಿಸಿ, ಹಾರ ಹಾಕಿ ಸನ್ಮಾನಿಸಿದರು.
ಕಾರ್ಯಕ್ರಮದಲ್ಲಿ ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್, ಉಪಮುಖ್ಯಮಂತ್ರಿ ಡಿಸಿಎಂ ಡಿ.ಕೆ.ಶಿವಕುಮಾರ್ ಸೇರಿದಂತೆ ಸಚಿವರು ಉಪಸ್ಥಿತರಿದ್ದರು. ಗುಜರಾತ್ನ ಅಹ್ಮದಾಬಾದ್ನಿಂದ ಬೆಂಗಳೂರಿನ ಎಚ್ಎಎಲ್ ವಿಮಾನ ನಿಲ್ದಾಣಕ್ಕೆ ಬಂದಿಳಿದ ಆರ್ಸಿಬಿ ಆಟಗಾರರನ್ನು ಸರಕಾರದ ಪರವಾಗಿ ಖುದ್ದು ಡಿಸಿಎಂ ಡಿಕೆ ಶಿವಕುಮಾರ್ ಸ್ವಾಗತಿಸಿದರು, ಸಂಜೆ 4:30ಕ್ಕೆ ಖಾಸಗಿ ಹೋಟೆಲ್ನಿಂದ ಬಸ್ಗಳಲ್ಲಿ ಆರ್ಸಿಬಿ ತಂಡ ಗೆದ್ದ ಟ್ರೋಫಿ ಸಮೇತ ವಿಧಾನಸೌಧಕ್ಕೆ ಆಗಮಿಸಿತ್ತು