ನವದೆಹಲಿ, ಜೂ. 25 (DaijiworldNews/TA): ವಾಯುವ್ಯ ದೆಹಲಿಯ ರಿಥಾಲಾದಲ್ಲಿರುವ ರಾಸಾಯನಿಕ ಕಾರ್ಖಾನೆಯಲ್ಲಿ ಬುಧವಾರ ಸಂಭವಿಸಿದ ಬೆಂಕಿ ಅವಘಡದಲ್ಲಿ ನಾಲ್ವರು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ಮಂಗಳವಾರ ರೋಹಿಣಿ ಸೆಕ್ಟರ್ -5 ಪ್ರದೇಶದ ಕಾರ್ಖಾನೆಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ದೆಹಲಿ ಅಗ್ನಿಶಾಮಕ ಸೇವೆಗಳ ಮುಖ್ಯಸ್ಥ ಅತುಲ್ ಗರ್ಗ್ ಅವರು 16 ಅಗ್ನಿಶಾಮಕ ವಾಹನಗಳು ಬೆಂಕಿಯನ್ನು ನಂದಿಸಲು ಧಾವಿಸಿವೆ ಎಂದು ತಿಳಿಸಿದ್ದಾರೆ.
ರಿಥಾಲಾ ಮೆಟ್ರೋ ನಿಲ್ದಾಣದ ಬಳಿಯ ಆವರಣದಿಂದ ಸಂಜೆ 7.25 ರ ಸುಮಾರಿಗೆ ಈ ಘಟನೆ ವರದಿಯಾಗಿದೆ ಎಂದು ಡಿಎಫ್ಎಸ್ ಮುಖ್ಯಸ್ಥರು ತಿಳಿಸಿದ್ದಾರೆ. ಇದುವರೆಗೆ ನಾಲ್ಕು ಜನರ ಶವ ಪತ್ತೆಯಾಗಿದೆ ಎನ್ನಲಾಗಿದೆ. ಶೋಧ ಕಾರ್ಯಾಚರಣೆ ಇನ್ನೂ ಮುಂದುವರೆದಿದೆ ಎಂದು ಹೇಳಲಾಗಿದೆ.