ಬೆಂಗಳೂರು, ಜು. 18 (DaijiworldNews/AA): ರಾಜ್ಯದಲ್ಲಿ ಅನುದಾನ ಹಂಚಿಕೆ ವಿಚಾರದಲ್ಲಿ ತಾರತಮ್ಯ ಮಾಡುವುದು ಸರಿಯಲ್ಲ. ಎಲ್ಲ ಪಕ್ಷಗಳ ಶಾಸಕರನ್ನು ಒಂದೇ ರೀತಿ ಕಾಣುವುದು ಅಗತ್ಯವಾಗಿದೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಮಾತನಾನಾಡಿದ ಅವರು, ಕಾಂಗ್ರೆಸ್ ಶಾಸಕರ ಕ್ಷೇತ್ರಕ್ಕೆ 50 ಕೋಟಿ ರೂಪಾಯಿ ಹಾಗೂ ಬಿಜೆಪಿ - ಜೆಡಿಎಸ್ ಶಾಸಕರ ಕ್ಷೇತ್ರಕ್ಕೆ 25 ಕೋಟಿ ರೂಪಾಯಿ ನೀಡುವುದು ಸರಿಯಲ್ಲ. ಈ ರೀತಿ ತಾರತಮ್ಯ ಮಾಡಿ, ಆನಂತರ ಕೇಂದ್ರದ ಮೇಲೆ ಆರೋಪ ಹೊರಿಸಲಾಗುತ್ತಿದೆ. ಎಲ್ಲ ಶಾಸಕರನ್ನು ಸಮಾನವಾಗಿ ಕಾಣಬೇಕು ಎಂದು ತಿಳಿಸಿದ್ದಾರೆ.
ರಾಜ್ಯದಲ್ಲಿ ಅಭಿವೃದ್ಧಿ ಕೆಲಸಕರ್ಯಗಳು ಕುಂಠಿತವಾಗಿವೆ. ಇಂತಹ ಸಮಯದಲ್ಲಿ ಶಾಸಕರಿಗೆ ಅಗತ್ಯ ಅನುದಾನ ನೀಡಬೇಕು. ರ್ಕಾರ ರ್ಥಿಕವಾಗಿ ನಷ್ಟದಲ್ಲಿದ್ದು, ಬೀದಿ ವ್ಯಾಪಾರಿಗಳಿಂದ ಬರುವ GST ಹೆಚ್ಚಿಸಲು ಮುಂದಾಗಿದೆ ಎಂದರು.
ನಾಡಪ್ರಭು ಕೆಂಪೇಗೌಡ ಅವರು ಕಟ್ಟಿದ ಬೆಂಗಳೂರನ್ನು ಒಡೆಯುವ ಕೆಲಸ ರಾಜ್ಯ ರ್ಕಾರ ಮಾಡುತ್ತಿದೆ. ಅದರ ಬದಲು ಅಭಿವೃದ್ಧಿ ಯೋಜನೆಗಳಿಗೆ ಆದ್ಯತೆ ನೀಡಬೇಕು. ಬೆಂಗಳೂರಿನಲ್ಲಿ ಸುರಂಗ ಮರ್ಗದ ಬದಲು ಮೆಟ್ರೋ ಯೋಜನೆಗೆ ಆದ್ಯತೆ ನೀಡಬೇಕು ಎಂದು ಹೇಳಿದರು.