ಬೆಂಗಳೂರು, ಜು. 18 (DaijiworldNews/AA): ಬಿಜೆಪಿ ಪಕ್ಷದ ಶಾಸಕರು, ವಿಧಾನ ಪರಿಷತ್ ಸದಸ್ಯರು, ಹಾಗೂ ಮುಖಂಡರುಗಳ ವಿರುದ್ಧ ರಾಜ್ಯ ಸರ್ಕಾರ ಒಂದಿಲ್ಲೊಂದು ಪ್ರಕರಣಗಳನ್ನು ದಾಖಲಿಸುತ್ತಿರುವುದು ಖಂಡನಾರ್ಹ ಎಂದು ಶಾಸಕ ಸಿ.ಕೆ. ರಾಮಮೂರ್ತಿ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಇಂದು ಮಾತನಾಡಿದ ಅವರು, ಸರ್ಕಾರದ ವಿರುದ್ಧ ಮಾತನಾಡುವ ಪ್ರತಿಪಕ್ಷಗಳ ಶಾಸಕರನ್ನು ಹತ್ತಿಕ್ಕುವ ಕೆಲಸ ಮಾಡಲಾಗುತ್ತಿದೆ. ರಾಜ್ಯ ಸರ್ಕಾರ ಗೃಹ ಇಲಾಖೆಯನ್ನು ತಮ್ಮ ಕೈಗೊಂಬೆಯನ್ನಾಗಿ ಮಾಡಿಕೊಂಡು ಪ್ರತಿಪಕ್ಷ ಶಾಸಕರು ಮತ್ತು ನಾಯಕರ ವಿರುದ್ಧ ದೂರು ದಾಖಲಿಸಲು ಬಳಸಿಕೊಳ್ಳಲಾಗುತ್ತಿದೆ. ಈ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ದ್ವೇಷದ ರಾಜಕಾರಣ ಮಾಡುತ್ತಿದೆ. ಇದು ಸರಿಯಲ್ಲ ಎಂದು ಹೇಳಿದರು.
ಬಿಜೆಪಿ ಬೆಂಗಳೂರು ಉತ್ತರ ಜಿಲ್ಲಾಧ್ಯಕ್ಷ ಎಸ್. ಹರೀಶ್, ಕಾಂಗ್ರೆಸ್ ಸರ್ಕಾರ ಆಡಳಿತ ಮತ್ತು ಪ್ರತಿಪಕ್ಷದ ಶಾಸಕರ ವಿಷಯದಲ್ಲಿ ದ್ವಂದ್ವ ನಿಲುವು ತೆಗೆದುಕೊಳ್ಳುತ್ತಿದೆ. ಕಾಂಗ್ರೆಸ್ ಶಾಸಕರ ವಿರುದ್ಧ ಯಾವುದೇ ದೂರ ದಾಖಲಿಸದೇ, ಕೇವಲ ಬಿಜೆಪಿ ನಾಯಕರನ್ನು ಗುರಿಯಾಗಿಸಿಕೊಂಡಿರುವುದು ಒಳ್ಳೆಯ ಬೆಳವಣಿಗೆ ಅಲ್ಲ ಎಂದರು.