ಚಿಕ್ಕಮಗಳೂರು, ಜು. 27 (DaijiworldNews/AK):ಪಶ್ಚಿಮ ಘಟ್ಟದ ನಿಷೇಧಿತ ಅರಣ್ಯ ಪ್ರದೇಶ ಬಿದಿರುತಳದಲ್ಲಿ ಅನುಮತಿ ಇಲ್ಲದೆ ಟ್ರಕ್ಕಿಂಗ್ ನಡೆಸುತ್ತಿದ್ದ 103 ಪ್ರವಾಸಿಗರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ .

ಮೂಡಿಗೆರೆ ತಾಲ್ಲೂಕಿನ ಚಾರ್ಮಾಡಿ ಘಾಟಿಯ ಆಳವಾದ ಕಾಡು ಪ್ರದೇಶದಲ್ಲಿ ಘಟನೆ ಸಂಭವಿಸಿದೆ. ಕಾನೂನುಬಾಹಿರವಾಗಿ ಅರಣ್ಯ ಪ್ರದೇಶ ಪ್ರವೇಶಿಸಿ ಟ್ರಕ್ಕಿಂಗ್ ನಡೆಸಲಾಗುತ್ತಿದೆ ಎಂಬ ಖಚಿತ ಮಾಹಿತಿಯ ಮೇರೆಗೆ ಬಣಕಲ್ ಹಾಗೂ ಬಾಳೂರು ಪೊಲೀಸ್ ಠಾಣೆಗಳ ಪೊಲೀಸರು ದಾಳಿ ನಡೆಸಿದರು.
ಬಣಕಲ್ ಪಿಎಸ್ಐ ರೇಣುಕಾ ಮತ್ತು ಬಾಳೂರು ಪಿಎಸ್ಐ ದಿಲೀಪ್ ಕುಮಾರ್ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಎಲ್ಲ 103 ಜನರನ್ನು ವಶಕ್ಕೆ ಪಡೆಯಲಾಗಿದೆ. ಈ ತಂಡದಲ್ಲಿ ಭಾಗವಹಿಸಿದ್ದವರು ಬೆಂಗಳೂರು ಮೂಲದ ಪ್ರಮುಖ ಐಟಿ ಕಂಪನಿಗಳ ಉದ್ಯೋಗಿಗಳು ಎಂದು ಮಾಹಿತಿ ಲಭ್ಯವಾಗಿದೆ.